ಮಡಿಕೇರಿ, ಜು.೧: ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತರಾದ ಕೆ.ಎನ್ ಪಣೀಂದ್ರ ಅವರು ತಾ.೩ ರಂದು(ನಾಳೆ) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತರು ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಾ.೩ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆ ಮತ್ತು ಮಧ್ಯಾಹ್ನ ೨.೩೦ ರಿಂದ ಸಂಜೆ ೫.೩೦ ಗಂಟೆವರೆಗೆ ಕೊಡಗು ಜಿಲ್ಲೆಗೆ ಸಂಬAಧಪಟ್ಟAತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬAಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಲಿದ್ದಾರೆ.
ಆದ್ದರಿಂದ ಈಗಾಗಲೇ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಿಸಿರುವ ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರಿಂದ ಹೊಸದಾಗಿ ಯಾವುದೇ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ದಿನಕರ್ ಶೆಟ್ಟಿ ಅವರು ತಿಳಿಸಿದ್ದಾರೆ.