ಮಡಿಕೇರಿ, ಜು.೧: ಪ್ರಸಕ್ತ(೨೦೨೬-೨೭) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ಸಾಮಾನ್ಯ ಪದವಿ ಕೋರ್ಸಿನ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ.೨೦ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: hಣಣಠಿs:// shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ-ರೂ.೨.೫೦ ಲಕ್ಷ ಮತ್ತು ಪ್ರವರ್ಗ-೨ಎ,೨ಬಿ,೩ಎ,೩ಬಿ, ಇತರೆ ಹಿಂದುಳಿದ ವರ್ಗ-ರೂ.೧ ಲಕ್ಷ ಆಗಿರುತ್ತದೆ.

ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ ಅನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜ.heಟಠಿಟiಟಿe@gmಚಿiಟ.ಛಿom ಈ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ-ಮಡಿಕೇರಿ ತಾಲೂಕು ಮೊ.ಸಂಖ್ಯೆ: ೯೬೩೨೨೨೫೮೪೭, ವೀರಾಜಪೇಟೆ ತಾಲೂಕು ಮೊ.ಸಂಖ್ಯೆ ೯೪೪೮೨೦೫೯೧೯, ಸೋಮವಾರಪೇಟೆ ತಾಲೂಕು ಮೊ.ಸಂಖ್ಯೆ: ೮೭೬೨೪೭೬೭೯೦ ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.