ಕೊಡ್ಲಿಪೇಟೆ, ಜು. ೧: ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉನ್ನತ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕೊಡ್ಲಿಪೇಟೆ ವಿದ್ಯಾಸಂಸ್ಥೆ ನಿರ್ದೇಶಕ ಬಿ.ಕೆ.ಯತೀಶ್ ಹೇಳಿದರು.

ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತç ವಿತರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸಮಾಜದಲ್ಲಿ ಸತ್ಪçಜೆಗಳಾಗಿ ಬಾಳಬೇಕು.ವಿದ್ಯೆಯು ಉತ್ತಮ ಸಂಸ್ಕಾರ ಹಾಗೂ ಬದುಕನ್ನು ನೀಡುತ್ತದೆ. ಆದ್ದರಿಂದ ತಾವೆಲ್ಲರೂ ಚನ್ನಾಗಿ ಓದಿ ಸಮಾಜದ ಆಸ್ತಿಯಾಗಿ ಬಾಳಬೇಕೆಂದು ಕರೆ ನೀಡಿದರು.

ದಾನಿಗಳು ಮತ್ತು ಶಾಲೆಯ ಹಳೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಧನಸಹಾಯ ನೀಡಿದ್ದು,ಇದರಲ್ಲಿ ಸಮವಸ್ತç ವಿತರಿಸಲಾಗಿದೆ ಎಂದರು.

ಮುಖ್ಯ ಶಿಕ್ಷಕ ಚಂದ್ರಶೇಖರ್ ಅಡ್ಮನಿ ಮಾತನಾಡಿ, ಸರ್ಕಾರದಿಂದ ವಿದ್ಯಾರ್ಥಿವೇತನ, ಪಠ್ಯ ಪುಸ್ತಕ, ಬಸ್ ಪಾಸ್, ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ ಸೇರಿ ಇನ್ನಿತರ ಸೌಲಭ್ಯಗಳನ್ನು ನೀಡುತ್ತಿದ್ದು, ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭ ಶಾಲಾ ಶಿಕ್ಷಕರಾದ ಎಂ.ಪಿ. ಶಿವಕುಮಾರಿ, ಬಿ.ವಿ.ಸುಮಾ, ಯು.ಡಿ. ಮಂಜುನಾಥ್, ಎ.ಪಿ. ಸುನೀಲ್, ಕಿರಣ್ ಕುಮಾರ್, ಕಂಪ್ಯೂಟರ್ ಶಿಕ್ಷಕಿ ನಂದಿತ, ಗುಮಾಸ್ತ ಪವನ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.