ಕೂಡಿಗೆ, ಜು. ೧: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ದೇವಸ್ಥಾನದಲ್ಲಿ ದೇವಾಂಗ ಸಂಘದ ವತಿಯಿಂದ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಚೌಡೇಶ್ವರಿ ಅಮ್ಮನವರ ಉಯಾಲೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.
ದೇವಾಲಯದ ಪ್ರಧಾನ ಅರ್ಚಕರಾದ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ದೇವಾಲಯದ ಆವರಣದಲ್ಲಿ ಉಯಾಲೋತ್ಸವವನ್ನು ಭಕ್ತಿಭಾವದಿಂದ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು.
ಈ ಸಂದರ್ಭ ದೇವಾಂಗ ಸಂಘದ ಅಧ್ಯಕ್ಷ ಡಿ.ವಿ. ರಾಜೇಶ್, ಉಪಾಧ್ಯಕ್ಷರಾದ ಡಿ.ಆರ್. ಸೋಮಶೇಖರ್ ಹಾಗೂ ಡಿ.ವಿ. ಚಂದ್ರು (ರಾಕಿ), ಪ್ರಧಾನ ಕಾರ್ಯದರ್ಶಿ ಡಿ.ಆರ್. ಕೃಷ್ಣಕುಮಾರ್, ಖಜಾಂಚಿ ಡಿ.ಜಿ. ಪ್ರದೀಪ್, ಸಹ ಕಾರ್ಯದರ್ಶಿ ಡಿ.ವಿ. ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಡಿ.ಎನ್. ವಿನೋದ್, ಜಂಟಿ ಕಾರ್ಯದರ್ಶಿ ಡಿ.ಆರ್. ಜಯಂತ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಗೌರವ ಸಲಹೆಗಾರರು, ಮಹಿಳಾ ಘಟಕದ ಪದಾಧಿಕಾರಿಗಳು, ಯುವಕ ಸಂಘದ ಸದಸ್ಯರು, ಸಮಿತಿಯ ನಿರ್ದೇಶಕರು ಹಾಗೂ ದೇವಾಂಗ ಸಂಘದ ಸದಸ್ಯರು ಉಪಸ್ಥಿತರಿದ್ದರು.