ಸುಂಟಿಕೊಪ್ಪ, ಜು. ೨: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶ ದಾಖಲಿಸಿದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರನ್ನು ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಶ್ರೀ ಮಂಜನಾಥಯ್ಯ-ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಶೇ.೧೦೦ ಫಲಿತಾಂಶ ಸಾಧಿಸಲು ಶ್ರಮಿಸಿದ ಮುಖ್ಯೋಪಾಧ್ಯಾಯ ಬಾಲಕೃಷ್ಣ ಹಾಗೂ ಶಿಕ್ಷಕರಾದ ಲಿಯೋನಾ, ಜಯಶ್ರೀ, ಚಿತ್ರಾ, ಶಾಂತ ಹೆಗ್ಡೆ ಮತ್ತು ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭ ೧೪ ವರ್ಷಗಳ ಕಾಲ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿರುವ ಬಾಲಕೃಷ್ಣ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಂಟಿ ಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ವಹಿಸಿದ್ದರು. ಇದೇ ವೇಳೆ ಇಬ್ರಾಹಿಂ ಬಾಪು ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದರು.

ವೇದಿಕೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಂ.ಎಸ್. ಸುನಿಲ್, ಉಪಾಧ್ಯಕ್ಷ ಆರ್.ಎಚ್. ಶರೀಫ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಿಲ್ ರಾಡ್ರಿಗಸ್, ಗ್ರಾ.ಪಂ. ಮಾಜಿ ಅಧ್ಯಕ್ಷರುಗಳಾದ ರೋಸ್ ಮೇರಿ ರಾಡ್ರಿಗಸ್, ಶಿವಮ್ಮ ಮಹೇಶ್, ಮಾಜಿ ಸದಸ್ಯರುಗಳಾದ ರಫೀಕ್‌ಖಾನ್, ವಸಂತಿ, ಉದ್ಯಮಿ ಎಸ್.ಜಿ. ಶ್ರೀನಿವಾಸ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಶ್ರೀಲತಾ, ಕ್ಲಸ್ಟರ್ ಅಧಿಕಾರಿ ಸೀಮಾ, ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಕುಮಾರ್, ೭ನೇ ಹೊಸಕೋಟೆ ಪ್ರೌಢಶಾಲೆಯ ಮುಖ್ಯ ಶಿಕ್ಷಕÀ ಸೋಮಯ್ಯ, ಕಾನ್‌ಬೈಲ್ ಪ್ರೌಢಶಾಲೆಯ ಮುಖ್ಯ ಶಿಕ್ಷಕÀ ಮೂರ್ತಿ, ನಿವೃತ್ತ ಶಿಕ್ಷಕ ಸಿ.ಟಿ. ಸೋಮಶೇಖರ್, ರಾಜ್ಯ ಸ್ತಿçÃಶಕ್ತಿ ಒಕ್ಕೂಟಗಳ ಅಧ್ಯಕ್ಷೆ ರೆಹನಾ ಸುಲ್ತಾನ್, ಸಿಎಸ್‌ಐ ದೇವಾಲಯದ ಧರ್ಮಗುರುಗಳಾದ ರೆ.ಫಾ. ಜೈಸನ್‌ಗೌಡರ್, ವಿಲಿಯಂ, ಮುರುಳೀಧರ್ ಕಾಮತ್, ಡೆನ್ನಿಸ್ ಡಿಸೋಜಾ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ತಾಲೂಕು ಶಿಕ್ಷಕರ ಸಂಘದ ಉಪಾಧ್ಯಕ್ಷೆ ಸೌಭಾಗ್ಯ, ಎಂ.ಎಸ್. ಸುನಿಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.