ಕೂಡಿಗೆ, ಜು. ೨ : ಕೂಡಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ಹೆಚ್.ಪಿ.ವಿ. ಲಸಿಕೆ ಅರಿವು ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಗರ್ಭಕಂಠದ ಕ್ಯಾನ್ಸರ್ ವಿರುದ್ಧ ನೀಡಲಾಗುವ ಹೆಚ್‌ಪಿವಿ ಲಸಿಕೆಯ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅರಿವು ಮೂಡಿಸಲಾಯಿತು. ಉದ್ಘಾಟನೆ ನೆರವೇರಿಸಿದ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣ ಅವರು ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಬಳಸುವ ಲಸಿಕೆ, (ಹೆಚ್.ಪಿ.ವಿ) ಹ್ಯೂಮನ್ ಪ್ಯಾಪಿಲೋಮ ವೈರಸ್ ಇದು ಕ್ಯಾನ್ಸರ್‌ಗೆ ಕಾರಣವಾಗುವ ವೈರಸ್‌ಗಳ ವಿರುದ್ಧ ರಕ್ಷಣೆ ನೀಡುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ, ದೈಹಿಕ ಮತ್ತು ಮಾನಸಿಕ ಆರೋಗ್ಯ ಅತ್ಯಗತ್ಯ ಎಂದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ಶೋಭಾ, ಶಾಲಾ ಆರೋಗ್ಯ ಅಧಿಕಾರಿ ಮೀನಾ, ಶಿಕ್ಷಕರಾದ ದಿನೇಶ್ ಚಾರಿ, ಅಮೃತ, ಹರಿಣಾಕ್ಷಿ, ಅಂಕಿತ, ದೊಡ್ಡಯ್ಯ, ಅಶ್ವತಿ, ಮೇಘನ ನಾಗೇಂದ್ರ, ಮಂಜು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.