ಮಡಿಕೇರಿ, ಜು. ೨ : ೨೦೨೬-೨೭ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.೫೦ರ ರಿಯಾಯಿತಿಯಲ್ಲಿ ಈ ಕೆಳಗೆ ನಮೂದಿಸಿರುವ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿAದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ (ಆರ್.ಟಿ.ಸಿ), ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.೧೦೦ರ ಛಾಫಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣ ಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಸೋಮವಾರಪೇಟೆ ತಾಲೂಕು ಕೃಷಿ ನಿರ್ದೇಶಕರಾದ ವೀರಣ್ಣ ಕೆ.ಪಿ ತಿಳಿಸಿದ್ದಾರೆ.

ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಯೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡೀಸಲ್ ಪಂಪ್ ಸೆಟ್, ಪವರ್ ಸ್ಪೆçÃಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇಕಡ ೫೦ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ರೈತರು ಪಡೆದುಕೊಳ್ಳಲು ಅರ್ಜಿಗಳನ್ನು ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸಲು ಸೋಮವಾರಪೇಟೆ ತಾಲೂಕು ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.