ಕೊಡ್ಲಿಪೇಟೆ, ಜು.೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜನಜಾಗೃತಿ ವೇದಿಕೆ ಮತ್ತು ಸ್ಥಳೀಯ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್, ಯುವ ಜನತೆ ತಮ್ಮ ಅಮೂಲ್ಯವಾದ ದೇಹ ಹಾಗೂ ಮನಸ್ಸುಗಳನ್ನು ರಕ್ಷಿಸಿಕೊಳ್ಳುವುದು ಗುರುತರವಾದ ಜವಾಬ್ದಾರಿಯಾಗಿದೆ. ಸಮಾಜಘಾತುಕ ಚಟುವಟಿಕೆಗಳಿಂದ ದೂರವಿದ್ದು ಆರೋಗ್ಯ ಕರವಾದ ಜೀವನವನ್ನು ರೂಪಿಸಿಕೊಳ್ಳುವುದರ ಜೊತೆಗೆ ಉತ್ತಮವಾದ ಸಮಾಜವನ್ನು ರೂಪಿಸ ಬೇಕಾದ ಜವಾಬ್ದಾರಿ ವಿದ್ಯಾರ್ಥಿಗಳಿಗಿದೆ ಎಂದು ಅವರು ಹೇಳಿದರು

ಜನ ಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಡಿ.ಭಗವಾನ್ ಗೌಡ ಅವರು ಮಾತನಾಡಿ, ಧಾರ್ಮಿಕ ಕಾರ್ಯದೊಂದಿಗೆ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಧರ್ಮಸ್ಥಳ ಸಂಸ್ಥೆಯಿAದ ನಿರಂತರವಾಗಿ ಜನಪರ ಕಾರ್ಯಕ್ರಮಗಳು ನಡೆಯುತ್ತಿವೆ.

ದುಶ್ಚಟಗಳು ಜನರ ಜೀವನವನ್ನು ನಾಶ ಗೊಳಿಸುತ್ತವೆ. ಇದನ್ನು ಮನಗಂಡು ಜನಜಾಗೃತಿ ವೇದಿಕೆ ಮದ್ಯವರ್ಜನ ಶಿಬಿರ ಆಯೋಜನೆ ಮಾಡುತ್ತಾ ಬಂದಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದೆ. ಗಾಂಜಾ ಪೆಡ್ಲರ್‌ಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವಂತಾಗಬೇಕು. ಇದರಿಂದ ಅಪರಾಧಗಳು ಕಡಿಮೆಯಾಗುತ್ತವೆ ಎಂದರು.

ಬ್ಯಾಡಗೊಟ್ಟ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್ ಮಾತನಾಡಿ, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿ ದಿಸೆಯಿಂದಲೇ ಅರಿವು ಮೂಡಿಸಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾದರೆ ಅವರ ಶ್ಯೆಕ್ಷಣಿಕ ಜೀವನ ಹಿನ್ನಡೆಯಾಗಿ ಜೀವನ ದುಸ್ಥರವಾಗುತ್ತದೆ ಎಂದರು.

ವೇದಿಕೆಯಲ್ಲಿ ಕೊಡ್ಲಿಪೇಟೆ ಉಪ ಪೊಲೀಸ್ ಠಾಣೆಯ ಸಿಬ್ಬಂದಿ ಮುನಾವರ್ ಪಾಷ , ಸಮಿತಿಯ ಅದ್ಯಕ್ಷ ಮಹೇಶ್ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ಶಾಲಿನಿ, ಸೇವಾ ಪ್ರತಿನಿಧಿ ರಾಣಿ, ಫಾತಿಮಾ, ಸುಮಿತ್ರಾ, ಶಿಕ್ಷಕ ಸುನಿಲ್ ಕಾರ್ಯಕ್ರಮ ನಿರ್ವಹಿಸಿದರು.ಮಡಿಕೇರಿ, ಜು.೧: ಅಂತರರಾಷ್ಟಿçÃಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನವನ್ನು ಬೆಂಗಳೂರಿನ ಶ್ರೀ ಕಂಠೀರವ ಸಭಾಂಗಣದಲ್ಲಿ ನಡೆಸಲಾಗಿದ್ದು, ಇದರ ನೇರ ಪ್ರಸಾರ ಕಾರ್ಯಕ್ರಮವನ್ನು ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ವೀರಾಜಪೇಟೆಯ ಡಿ.ಎಸ್.ಪಿ ಮಹೇಶ್ ಕುಮಾರ್ ಮತ್ತು ವೀರಾಜಪೇಟೆ ನಗರದ ಸಬ್ ಇನ್ಸ್ಪೆಕ್ಟರ್ ಹೆಚ್.ಎಸ್ ಪ್ರಮೋದ್ ಕುಮಾರ್ ಅವರು ಈ ಸಂದರ್ಭ ಹಾಜರಿದ್ದು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆ ಮತ್ತು ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮ ಅರುಣ್ ಮತ್ತು ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸೋಮವಾರಪೇಟೆ, ಜು. ೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ನೇರುಗಳಲೆ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಪ್ರೌಢಶಾಲೆಯ ಪ್ರಾಂಶುಪಾಲೆ ರಾಜೇಶ್ವರಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಬಾಲ್ಯಾವಸ್ಥೆಯಿಂದಲೇ ಮಾದಕ ವಸ್ತುಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ದುಶ್ಚಟಗಳಿಂದ ದೂರವಿದ್ದು, ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದರಲ್ಲದೆ, ಮಾದಕ ವಸ್ತುಗಳ ಸೇವನೆಯಿಂದ ಆಗುವ ತೊಂದರೆಗಳ ಬಗ್ಗೆ ಸವಿವರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಯೋಜನೆಯ ವಲಯ ಮೇಲ್ವಿಚಾರಕ ದೇವೇಂದ್ರ ಪ್ರಸಾದ್, ತಾಲೂಕು ಕೃಷಿ ಮೇಲ್ವಿಚಾರಕ ಸ್ವಾಮಿ, ಸೇವಾ ಪ್ರತಿನಿಧಿ ಶೈಲ, ಸಿ.ಎಸ್.ಸಿ. ಸೇವಾಗಾರ್ತಿ ನೇಹಾ, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.