ಮಡಿಕೇರಿ, ಜು. ೨: ಕೊಡಗು ಜಿಲ್ಲೆಯ ಮರಗೋಡು - ಕೊಂಡAಗೇರಿ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಂತಿರುವುದರಿAದ ರಸ್ತೆ ಮತ್ತು ಗುಂಡಿಗಳ ವ್ಯತ್ಯಾಸವೇ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮವಾಗಿ ಬೈಕ್, ಆಟೋ, ಶಾಲಾ ವಾಹನ, ಕಾರು ಸೇರಿದಂತೆ ಎಲ್ಲಾ ವಾಹನಗಳ ಸವಾರರು ಪ್ರತಿದಿನ ಜೀವಭಯದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.
ಈ ರಸ್ತೆಯ ಮೂಲಕ ಪ್ರತಿನಿತ್ಯ ವಿದ್ಯಾರ್ಥಿಗಳು, ರೈತರು, ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ಸಾವಿರಾರು ಸಾರ್ವಜನಿಕರು ಸಂಚರಿಸುತ್ತಿದ್ದು, ರಸ್ತೆ ದುರವಸ್ಥೆಯಿಂದ ವಾಹನಗಳಿಗೆ ಹಾನಿಯಾಗುವುದರ ಜೊತೆಗೆ ಅಪಘಾತಗಳ ಭೀತಿಯೂ ಹೆಚ್ಚಾಗಿದೆ. ಹಲವು ಬಾರಿ ಸಂಬAಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ರಸ್ತೆ ದುರಸ್ತಿಗೆ ಯಾವುದೇ ಶಾಶ್ವತ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಮರಗೋಡು - ಕೊಂಡAಗೇರಿ ರಸ್ತೆಯಲ್ಲಿ ಪ್ರತಿದಿನ ಸಂಚರಿಸುವುದು ಜೀವದ ಜೊತೆ ಜೂಜಾಡಿದಂತಾಗಿದೆ. ಮಳೆ ಬಂದರೆ ಗುಂಡಿಗಳು ಕಾಣದೆ ಅಪಘಾತದ ಭೀತಿ ಹೆಚ್ಚಾಗುತ್ತದೆ. ಇನ್ನಷ್ಟು ಅನಾಹುತಗಳು ನಡೆಯುವ ಮುನ್ನ ಸಂಬAಧಪಟ್ಟ ಅಧಿಕಾರಿಗಳು ತಕ್ಷಣ ರಸ್ತೆ ದುರಸ್ತಿ ಮಾಡಿದರೆ ಒಳಿತು ಎಂದು ಗ್ರಾಮಸ್ಥ ದರ್ಶನ್ ಸುಕುಮಾರ್ ಹೇಳುತ್ತಾರೆ.
ಪ್ರತಿದಿನ ಶಾಲಾ ಮಕ್ಕಳನ್ನು ಇದೇ ರಸ್ತೆಯಲ್ಲಿ ಕರೆದುಕೊಂಡು ಹೋಗುತ್ತೇವೆ. ರಸ್ತೆಯಲ್ಲಿರುವ ದೊಡ್ಡ ಗುಂಡಿಗಳಿAದ ಮಕ್ಕಳ ಸುರಕ್ಷತೆ ಬಗ್ಗೆ ಆತಂಕ ಎದುರಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂದು ಚಾಲಕ ಹರೀಶ್ ಮನವಿ ಮಾಡಿದ್ದಾರೆ.
ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ನಂದಕುಮಾರ್ ಮಾತನಾಡಿ, ರಸ್ತೆ ಸಮಸ್ಯೆ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ತಕ್ಷಣ ರಸ್ತೆ ದುರಸ್ತಿ ಆರಂಭಿಸದಿದ್ದರೆ ಆಟೋ ಚಾಲಕರು, ಮಾಲೀಕರ ಸಂಘ ಹಾಗೂ ಗ್ರಾಮಸ್ಥರು ಸೇರಿ ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ವಿನೂತನ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗ್ರಾಮಸ್ಥರು ಕೂಡ ರಸ್ತೆ ದುರಸ್ತಿಗೆ ಆಗ್ರಹಿಸಿ, ಇದು ಕೇವಲ ರಸ್ತೆ ಸಮಸ್ಯೆಯಲ್ಲ, ಸಾರ್ವಜನಿಕರ ಜೀವದ ಪ್ರಶ್ನೆಯಾಗಿದೆ. ಜಿಲ್ಲಾಡಳಿತ ಹಾಗೂ ಸಂಬAಧಪಟ್ಟ ಇಲಾಖೆ ಕೂಡಲೇ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಆಟೋ ಚಾಲಕರು, ಮಾಲೀಕರ ಸಂಘ ಮತ್ತು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
- ಅಶೋಕ್, ಮಡಿಕೇರಿ.