ನಾಪೋಕ್ಲು, ಜು. ೩: ಇಲ್ಲಿಗೆ ಸಮೀಪದ ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಮುಖ್ಯೋಪಾಧ್ಯಾಯರಾಗಿ ಪದೋನ್ನತಿ ಪಡೆದು ಚೆರಿಯಪರಂಬು ಶಾಲೆಗೆ ವರ್ಗಾವಣೆಯಾಗಿರುವ ಶಿಕ್ಷಕ ಡಬ್ಲ್ಯು.ಎಂ. ವೇದಪ್ರಸಾದ್ ಅವರಿಗೆ ಶಾಲಾ ಸಿಬ್ಬಂದಿ, ಎಸ್‌ಡಿಎಂಸಿ ಹಾಗೂ ವಿದ್ಯಾರ್ಥಿಗಳ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪ್ರಬಾರ ಮುಖ್ಯೋಪಾಧ್ಯಾಯ ಕಿಶೋರ್ ಕುಮಾರ್, ಚೆಯ್ಯಂಡಾಣೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪವಿತ್ರ ಮಾತನಾಡಿದರು. ಇದೇ ಸಂದರ್ಭ ನಿರ್ಗಮಿತ ಮುಖ್ಯೋಪಾಧ್ಯಾಯರು ಶಾಲೆಗೆ ಪ್ರಿಂಟರ್‌ಅನ್ನು ಕೊಡುಗೆಯಾಗಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಮುಖ್ಯ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಮಂಜುಳಾ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಸುಮಿತ್ರಾ ವಂದಿಸಿದರು.