ಮಡಿಕೇರಿ, ಜು. ೩: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ ಕೊಡಗು ಜಿಲ್ಲೆ, ಕುಶಾಲನಗರ ಎ.ಪಿ.ಸಿ.ಎಂ.ಎಸ್. ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ರೈತ ಸಹಕಾರ ಭವನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು. ರಾಬಿನ್ ದೇವಯ್ಯ ಮಾತನಾಡಿ, ಗಿಡಗಳನ್ನು ನೆಡುವುದು ಮಾತ್ರವಲ್ಲ ಅವುಗಳ ಪೋಷಣೆಯೂ ಅತ್ಯಗತ್ಯ. ಆಗ ಮಾತ್ರ ಇಂತಹ ಕಾರ್ಯಕ್ರಮಗಳಿಂದ ಸಮಾಜಕ್ಕೆ ಕಾಣಿಕೆ ನೀಡಿದಂತಾಗುತ್ತದೆ ಎಂದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಅಮೃತ್ ವಿ.ಸಿ., ಎಸ್.ಆರ್. ಸುನಿಲ್ ರಾವ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸೋಮವಾರಪೇಟೆ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಪಿ.ಬಿ. ಮೋಹನ್, ಕುಶಾಲನಗರ ಎ.ಪಿ.ಸಿ.ಎಂ.ಎಸ್.ನ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕುಶಾಲನಗರ ಎ.ಪಿ.ಸಿ.ಎಂ.ಎಸ್.ನ ನಿರ್ದೇಶಕರು ಹಾಗೂ ಕುಶಾಲನಗರದ ಸ್ಥಳೀಯ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿ ಹಾಜರಿದ್ದರು.