ಕೂಡಿಗೆ, ಜು. ೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ಗ್ರಾಮದಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳಿಗೆ ಹಕ್ಕುಪತ್ರವನ್ನು ನೀಡುವಂತೆ ಆಗ್ರಹಿಸಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಗರ್ಜನೆಯ ಜಿಲ್ಲಾಧ್ಯಕ್ಷ ಎಲ್.ಎಂ. ನಾಗರಾಜು ಸೇರಿದಂತೆ ವಿವಿಧ ಸಂಘಟನೆ ಪ್ರಮುಖರು ಮನವಿ ಸಲ್ಲಿಸಿದರು.
ಸುಂದರನಗರದಿAದ ಪಾದಯಾತ್ರೆಯ ಮೂಲಕ ತೆರಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಕೊಡಗು ಜನ ಅಭಿವೃದ್ಧಿ ಸಮಿತಿಯ ಎಂ.ಎA. ದಾವುದ್, ಕೊಡಗು ರಕ್ಷಣಾ ವೇದಿಕೆಯ ಸಂಚಾಲಕ ಜಾನ್ಸನ್ ಡಿಸೋಜಾ ಸೇರಿದಂತೆ ವಿವಿಧ ಸಂಘಟನೆ ಪ್ರಮುಖರು ಸಮಿತಿಯ ಪದಾಧಿಕಾರಿಗಳು ಇದ್ದರು.