ಮಡಿಕೇರಿ, ಜು. ೩: ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ರೋಗಿಗಳ ಅನುಕೂಲಕ್ಕಾಗಿ ನಿರ್ಮಿಸಲಾದ ನೂತನ ಸೌಲಭ್ಯಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮ ತಾ. ೪ ರಂದು ಬೆಳಗ್ಗೆ ೧೦ ಗಂಟೆಗೆ ನಡೆಯಲಿದೆ.
ಪ್ರಮುಖ ಸೌಲಭ್ಯಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ, ಕ್ಯಾನ್ಸರ್ ಶಸ್ತçಚಿಕಿತ್ಸೆ ಸೇವೆ, ೨ಡಿ ಇಕೋ ಸೌಲಭ್ಯ, ರೋಗಿಗಳಿಗೆ ಪೌಷ್ಟಿಕ ಆಹಾರ ನೀಡಲು ಮಾಡ್ಯುಲರ್ ಕಿಚನ್ ಹಾಗೂ ಆಧುನಿಕ ಉಪಕರಣಗಳೊಂದಿಗೆ ಮೇಲ್ದರ್ಜೆಗೇರಿದ ರಕ್ತ ನಿಧಿ ಕೇಂದ್ರ ಉದ್ಘಾಟನೆಯಾಗಲಿದೆ.
ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತÀರ್ ಗೌಡ ಮತ್ತು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಸೌಲಭ್ಯಗಳನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ನಿರ್ದೇಶಕ ಮತ್ತು ಡೀನ್ ಡಾ. ಲೋಕೇಶ್ ಎ.ಜೆ. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಆಡಳಿತಾಧಿಕಾರಿ ರೋಹಿಣಿ ಕೆ.ಎಂ., ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕ ಡಾ. ಸೋಮಶೇಖರ್ ಹೆಚ್.ಕೆ., ಜಿಲ್ಲಾ ಶಸ್ತçಚಿಕಿತ್ಸಕ ಡಾ. ನಂಜುAಡಯ್ಯ ಎನ್., ಸ್ಥಾನೀಯ ವೈದ್ಯಾಧಿಕಾರಿಗಳಾದ ಡಾ. ಅಭಿನಂದನ್ ಬಿ. ವಂದಕುದರಿ, ಡಾ. ಧನಂಜಯ ಕುಮಾರ್ ಎಸ್.ಎಂ. ಭಾಗವಹಿಸಲಿದ್ದಾರೆ.