ಮಡಿಕೇರಿ, ಜು. ೪: ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೂಡುಬಿದಿರೆ ಪ್ರೆಸ್ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ನಡೆದ ಮಾಧ್ಯಮ ಹಬ್ಬ ಕಾರ್ಯಕ್ರಮದಲ್ಲಿ ನವೀನ್ ಸುವರ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಧ್ಯಮ ಕ್ಷೇತ್ರದಲ್ಲಿನ ಸೇವೆಗಾಗಿ ನವೀನ್ ಅವರನ್ನು ಸನ್ಮಾನಿಸಲಾಯಿತು. ಮೂಲತಃ ಮೂಡುಬಿದಿರೆ ತಾಲೂಕಿನ ಬಿರಾವ್ ನಿವಾಸಿಯಾಗಿರುವ ನವೀನ್ ಕಳೆದ ೧೪ ವರ್ಷಗಳಿಂದ ಕೊಡಗು ಜಿಲ್ಲೆಯ ಟಿವಿ೯ ವೀಡೀಯೋ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.