ಹಾಲುಗುಂದ ಗ್ರಾಮದ ನಿವಾಸಿ ಪ್ರಸ್ತುತ ಮಡಿಕೇರಿಯಲ್ಲಿ ನೆಲೆಸಿದ್ದ ಪಂದಿಕAಡ ದಿ. ನಾಣಯ್ಯ ಅವರ ಪುತ್ರ ನಿವೃತ್ತ ಯೋಧ ಜಯಕುಮಾರ್ (ಯತೀಶ್-೫೫) ತಾ. ೩ ರಂದು ಅನಾರೋಗ್ಯದಿಂದ ನಿಧನರಾದರು. ಪಂದಿಕAಡ ಜಯಕುಮಾರ್ ಅವರು ದೇಶಸೇವೆಯಲ್ಲಿ ತೊಡಗಿಸಿಕೊಂಡು ನಿವೃತ್ತರಾದ ಬಳಿಕ ಮಡಿಕೇರಿ ಜಿಲ್ಲಾ ಪೊಲೀಸ್ ಇಲಾಖೆಯ ಡಿ.ಆರ್. ವಿಭಾಗದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರ ಅಂತ್ಯಕ್ರಿಯೆ ತಾ. ೪ ರಂದು ಸಕಲ ಸರಕಾರಿ ಗೌರವದೊಂದಿಗೆ ಸ್ವಗ್ರಾಮದಲ್ಲಿ ನೆರವೇರಿತು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
* ಬಿಟ್ಟಂಗಾಲ ಗ್ರಾಮದ ನಿವಾಸಿ ಹಿರಿಯ ಜನಪದ ಹಾಡುಗಾರ ಪೊನ್ನೀರ ವಾಸು ಉತ್ತಯ್ಯ (೮೦) ತಾ. ೪ ರಂದು ನಿಧನರಾದರು. ಅಂತ್ಯಕ್ರಿಯೆ ತಾ. ೫ ರಂದು (ಇಂದು) ಮಧ್ಯಾಹ್ನ ೧ ಗಂಟೆಯೊಳಗೆ ಸ್ವಗ್ರಾಮದಲ್ಲಿ ನಡೆಯಲಿದೆ. ಮೃತರು ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ಪೊನ್ನೀರ ಗಗನ್ ಸೇರಿದಂತೆ ಈರ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.