ಸುಂಟಿಕೊಪ್ಪ, ಜು. ೩: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾ ಸಮಿತಿಯ ವತಿಯಿಂದ ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್. ಸಬಾಸ್ಟಿನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚೆಗೆ ಮಡಿಕೇರಿಯ ಹೊಟೇಲ್ ವ್ಯಾಲಿವ್ಯೂ ಸಭಾಂಗಣದಲ್ಲಿ ಆಯೋಜಿಸಲಾದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆಯಲ್ಲಿ ಸಂಘದ ಅಧ್ಯಕ್ಷ ಜಾನ್ಸನ್ ಪಿಂಟೋ ಅವರು, ಸುಂಟಿಕೊಪ್ಪದಲ್ಲಿ ಆಯೋಜಿಸಲಾದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್. ಸಬಾಸ್ಟಿನ್ ಹಾಗೂ ಪದಾಧಿಕಾರಿಗಳು ಯಶಸ್ವಿಯಾಗಿ ನಡೆಸಿದ್ದಾರೆ ಎಂದು ಅವರನ್ನು ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಮಿತಿಯ ಕಾರ್ಯಾಧ್ಯಕ್ಷ ವಿ.ಎ. ಲಾರೆನ್ಸ್, ಉಪಾಧ್ಯಕ್ಷ ಜೋಕಿಂ ವಾಸ್, ವಿನ್ಸಿ ಡಿಸೋಜ, ಪ್ರಧಾನ ಕಾರ್ಯದರ್ಶಿ ಅಂತೋಣಿ ಡಿಸೋಜ, ಸಂಘಟನಾ ಕಾರ್ಯದರ್ಶಿ ಮಾರ್ವಿನ್ ಲೋಬೋ, ವೀರಾಜಪೇಟೆ ತಾಲೂಕು ಅಧ್ಯಕ್ಷ ಆಗಸ್ಟಿನ್ ಜೇವಿಯರ್, ಮಾಜಿ ಕಾರ್ಯದರ್ಶಿ ಜೂಡಿವಾಜ್, ಪೊನ್ನಂಪೇಟೆ ತಾಲೂಕು ಘಟಕದ ಅಧ್ಯಕ್ಷ ಸುಭಾಷ್ ಮ್ಯಾಥ್ಯು, ಮಾರ್ಷಲ್, ಜೋಸೆಫ್ ಡಿಸೋಜ, ಬ್ಲೇಜ್ಸಿ ಸಿಕ್ವೇರಾ, ರಾಬಿನ್‌ಪೌಲ್, ಕುಶಾಲನಗರ ತಾಲೂಕು ಘಟಕದ ಕೆ.ಎ. ಪೀಟರ್, ಮಹಿಳಾ ಘಟಕದ ಅಧ್ಯಕ್ಷೆ ಫಿಲೋಮಿನಾ, ಉಪಾಧ್ಯಕ್ಷೆ ರೋಸ್‌ಮೇರಿ ರಾಡ್ರಿಗಸ್ ಮತ್ತಿತರರು ಇದ್ದರು.