ಕೂಡಿಗೆ, ಜು. ೪: ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಪರ್ಯಾಯವಾಗಿ “ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಾರ್ ಅಂಡ್ ಅಜೀವಿಕ್ ಮಿಷನ್” ಪ್ರಾರಂಭವಾಗಿದ್ದು, ಈ ಕುರಿತಂತೆ ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ತರಬೇತುದಾರರಾದ ಕುಶಾಲನಗರ ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರಾದ ರಾಕೇಶ್ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಅವರಿಂದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಯೋಜನೆಯ ಬಗ್ಗೆ ವಿವರವಾದ ಮಾಹಿತಿ ನೀಡಲಾಯಿತು. ತರಬೇತಿಯಲ್ಲಿ ಕುಶಾಲನಗರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಡಾಟಾ ಎಂಟ್ರಿ ಅಪರೇಟರ್ಸ್, ಸಂಬAಧಪಟ್ಟ ನರೇಗಾ ತಾಂತ್ರಿಕ ಸಹಾಯಕರುಗಳು ಮತ್ತು ನರೇಗಾ ಸಿಬ್ಬಂದಿಗಳು ಹಾಜರಿದ್ದರು.