ಮಡಿಕೇರಿ, ಜು. ೩: ಸರಕಾರಿ ಕೆಲಸ ದೇವರ ಕೆಲಸ ಎಂದು ಕರೆಯುತ್ತಾರೆ. ಇದನ್ನು ಎಂದು ಮರೆಯಬೇಡಿ. ಆಡಳಿತಾತ್ಮಕ ಕೆಲಸಗಳಿಗೆ ಬರುವ ಸಾರ್ವಜನಿಕರಿಗೆ ಕಿರುಕುಳ ನೀಡದೆ ಸಕಾಲದಲ್ಲಿ ಅವರಿಗೆ ಸ್ಪಂದಿಸಿ ನ್ಯಾಯ ಕೊಡಿಸುವ ಕರ್ತವ್ಯ ಅಧಿಕಾರಿಗಳದ್ದಾಗಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಹೇಳಿದರು.
ನಗರದ ಜಿ.ಪಂ.ಸಭಾAಗಣದಲ್ಲಿ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಂಬAಧ ಜಿಲ್ಲಾ ಹಾಗೂ ಅಧಿಕಾರಿಗಳು, ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ನಡೆದ ವಿಚಾರಣಾ ಸಭೆಗೂ ಮೊದಲು ಅವರು ಮಾತನಾಡಿದರು.
ಈ ವೇಳೆ ಸಾರ್ವಜನಿಕರೊಂದಿಗೆ ಹೇಗೆ ನಡೆದುಕೊಳ್ಳಬೇಕು. ಕಾನೂನಾತ್ಮಕವಾಗಿರುವ ಅಂಶಗಳನ್ನು ಅಧಿಕಾರಿಗಳಿಗೆ ವಿವರಿಸಿ, ಸಂವಿಧಾನದಡಿ ಅಧಿಕಾರಿಗಳು ಕೆಲಸ ಮಾಡಬೇಕು. ಲಂಚ ಎಂಬುದು ಕ್ಯಾನ್ಸರ್‌ನಂತೆ ಇದು ಹಬ್ಬಿದರೆ ಸಮಾಜಕ್ಕೆ ಕೆಡುಕು. ಮುಂದಿನ ಪೀಳಿಗೆಗೆ ಸದೃಢ ಸಮಾಜವನ್ನು ನೀಡಬೇಕು. ಲಂಚರಹಿತ ಆಡಳಿತ ಸಿಗುವಂತಾಗಬೇಕು ಎಂದರು.
ಕೊಡಗು ಜಿಲ್ಲೆಯಿಂದ ಲೋಕಾಯುಕ್ತಕ್ಕೆ ೨೦೭ ಪ್ರಕರಣಗಳು ಬಾಕಿ ಇದ್ದು, ೮೦ ಪ್ರಕರಣಗಳನ್ನು ವೈಯಕ್ತಿಕ ನೆಲೆಯಲ್ಲಿ ಆಯ್ಕೆ ಮಾಡಿಕೊಂಡು ಸಂಬAಧಿಸಿದ ಅಧಿಕಾರಿಗಳು ಹಾಗೂ ದೂರುದಾರರ ವಿಚಾರಿಸಿ ಇತ್ಯರ್ಥಕ್ಕೆ ಮುಂದಾಗಲಾಗುವುದು ಎಂದ ಅವರು, ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಸಮಾಜದಲ್ಲಿರುವ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಪ್ರತಿಯೊಬ್ಬರಿಗೂ ಉತ್ತಮ ಜೀವನ ನಡೆಸುವ ಹಕ್ಕು ಇದೆ. ಆ ನಿಟ್ಟಿನಲ್ಲಿ ಸೌಲಭ್ಯಗಳನ್ನು ತಲುಪಿಸಲು ಮುಂದಾಗಬೇಕು. ಪ್ರತಿಯೊಬ್ಬರಿಗೂ ಸಾಮಾನ್ಯ ಬದುಕು ನಡೆಸಲು ಬೇಕಿರುವ ಕನಿಷ್ಟ ಸೌಲಭ್ಯವನ್ನಾದರೂ ಕಲ್ಪಿಸಬೇಕು. ಸಾಮಾನ್ಯ ಜನರಿಗೆ ಸರ್ಕಾರದ ಸೌಲಭ್ಯ ಕಲ್ಪಿಸುವಲ್ಲಿ ಎಡವುತ್ತೇವೆ. ಜನ ಸಮೂಹದಲ್ಲಿ ಒಳ್ಳೆಯ ಅಭಿಪ್ರಾಯ ಇರಬೇಕು. ಸಮಸ್ಯೆಗಳು ಹೇಗೆ ಉಂಟಾಗುತ್ತವೆ ಎಂಬುದನ್ನು ಅರಿತುಕೊಳ್ಳಬೇಕು. ಕಾನೂನುಗಳು ಉಲ್ಲಂಘನೆಯಾಗಬಾರದು. ಕರ್ತವ್ಯಲೋಪ ಮಾಡಬಾರದು ಎಂದು ಎಚ್ಚರಿಸಿದರು.
ನಿರ್ವಹಿಸುವ ಕೆಲಸವನ್ನು ಸಮಯೋಚಿತ ಹಾಗೂ ಸಂದರ್ಭಯೋಚಿತವಾಗಿ ನಿರ್ವಹಿಸಬೇಕು.
ಕಾಲ ಕಾಲಕ್ಕೆ ಮಾಸಾಶನ ನೀಡಬೇಕು. ಸರ್ಕಾರದ ಸೌಲಭ್ಯವನ್ನು ಸಕಾಲದಲ್ಲಿ ತಲುಪಿಸಬೇಕು. ಕಚೇರಿ ಕೆಲಸ ನಿರ್ವಹಣೆಯಲ್ಲಿ ನಿಧಾನಗತಿ ಇರಬಾರದು ಎಂದು ಎಚ್ಚರಿಸಿದರು. ಸರ್ಕಾರಿ ಸೇವಕರಲ್ಲಿ ದುರಾಡಳಿತ ಇರಬಾರದು. ಕೆಟ್ಟ ಹೆಸರು ಬರದಂತೆ ಕೆಲಸ ನಿರ್ವಹಿಸಬೇಕು ಎಂದರು.
ಜನರಿಗೆ ಹತ್ತಿರವಾಗಿರುವ ಅಧಿಕಾರಿಗಳು ಮನೆ ಬಾಗಿಲಿಗೆ ಸೇವೆ ಕಲ್ಪಿಸುತ್ತಾರೆ. ಆ ನಿಟ್ಟಿನಲ್ಲಿ ಮುಂದಾಗಬೇಕು. ಸರ್ವರಿಗೂ ಸಮಪಾಲು ಸಿಗಬೇಕು. ಸಾರ್ವಜನಿಕರ ಹಕ್ಕು ಭಾದ್ಯತೆ ರಕ್ಷಿಸಬೇಕು. ಭ್ರಷ್ಟಾಚಾರ ತಡೆಯಬೇಕು ಎಂದರು.
೩ ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ನೀಡಲಾಗುತ್ತಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಭೂಮಿ, ಕಟ್ಟಡ ಪರವಾನಗಿ, ವಿದ್ಯುತ್ ಸಂಪರ್ಕ, ಬಸ್ ಸಂಪರ್ಕ ಮತ್ತಿತರ ಬಗ್ಗೆ ಹಲವು ವಿಚಾರಗಳ ಕುರಿತು ವಿಚಾರಣೆ ನಡೆಯಿತು.
ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶರಾದ ಕಿರಣ್ ಪಾಟೀಲ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ಲೋಕಾಯುಕ್ತ ಎಸ್ಪಿ ಉದೇಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಕೊಡಗು ಲೋಕಾಯುಕ್ತ ಡಿವೈಎಸ್‌ಪಿ ದಿನಕರ್ ಶೆಟ್ಟಿ ತಹಶೀಲ್ದಾರ್ ಶ್ರೀಧರ ಸೇರಿದಂತೆ ಇನ್ನಿತರರು ಹಾಜರಿದ್ದರು.