ಚೆಯ್ಯಂಡಾಣೆ, ಜು. ೪ : ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯ ಚೇಲಾವರ ಗ್ರಾಮದ ಚೇಲಾವರ ಜಲಪಾತ ಹಾಗೂ ಕಬ್ಬೆಬೆಟ್ಟಕ್ಕೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ತಾ. ೬ರಂದು ಬೆಳಿಗ್ಗೆ ೧೧ ಗಂಟೆಗೆ ಚೇಲಾವರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಾರ್ವಜನಿಕ ಸಭೆ ಕರೆಯಲಾಗಿದೆ ಎಂದು ನರಿಯಂದಡ ಗ್ರಾಮ ಪಂಚಾಯಿತಿ ಪ್ರಕಟಣೆ ತಿಳಿಸಿದೆ.