ಕೂಡಿಗೆ, ಜು. ೩: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಗೆ ಕೇವಲ ೨ ಅಡಿಗಳಷ್ಟು ಮಾತ್ರ ನೀರು ಹರಿದುಬರುತ್ತಿದೆ.

ಕಳೆದ ಸಾಲಿನಲ್ಲಿ ಜೂನ್ ಅಂತ್ಯಕ್ಕೆ ಅಣೆಕಟ್ಟೆ ಸಂಪೂರ್ಣವಾಗಿ ಭರ್ತಿಯಾಗಿ ಅಣೆಕಟ್ಟೆಯ ಭದ್ರತಾ ಹಿತದೃಷ್ಟಿಯಿಂದ ನಿಗಮದ ಸೂಚನೆಯಂತೆ ಸಂಗ್ರಹದ ಮಟ್ಟವನ್ನು ಕಾಪಾಡಿಕೊಂಡು ಹೆಚ್ಚುವರಿಯಾಗಿ ಬರುತ್ತಿದ್ದ ನೀರನ್ನು ನದಿಗೆ ಹರಿಸಲಾಗಿತ್ತು.ಹಾರಂಗಿ ಮತ್ತು ಕಾವೇರಿ ನದಿಯ ನೀರಿನ ಹರಿಯುವಿಕೆ ಮಟ್ಟದಲ್ಲಿ ಹೆಚ್ಚಾಗಿ ಕಾವೇರಿ ನದಿದಂಡೆಯ ಅನೇಕ ಗ್ರಾಮಗಳ ತಗ್ಗುಪ್ರದೇಶಕ್ಕೆ ನೀರು ನುಗ್ಗಿ ಜಲಾವೃತಗೊಂಡ ಸನ್ನಿವೇಶ ಕಳೆದ ವರ್ಷ ಜೂನ್ ತಿಂಗಳ ಕೊನೆಯ ವಾರದಲ್ಲಿ ಕಂಡುಬAದಿತು. ಅದರೆ ಈ ಸಾಲಿನಲ್ಲಿ ಬರಗಾಲದ ಛಾಯೆಯಲ್ಲಿ ಹಾರಂಗಿ ಜಲಾನಯನ ಪ್ರದೇಶದಲ್ಲಿ ಮಳೆ ಬೀಳದ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ಒಳ ಹರಿವಿನ ಪ್ರಮಾಣವು ತೀರಾ ಕಡಿಮೆಯಾಗಿದೆ.

ಹಾರಂಗಿ ಅಣೆಕಟ್ಟೆಯ ಅಚ್ಚುಕಟ್ಟು ಪ್ರದೇಶದ ಜಿಲ್ಲೆಯ ನೂರಾರು ಎಕರೆಗಳಷ್ಟು ಪ್ರದೇಶದ ರೈತರು ಜೂನ್ ತಿಂಗಳಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಉಳುಮೆ ಮಾಡಿಸಲು ಸಾದ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿ ಅಚ್ಚುಕಟ್ಟು ಪ್ರದೇಶ ಭೂಮಿ ಪಾಳುಬಿದ್ದು ದನಕರುಗಳಿಗೆ ಮೇವಿನ ತಾಣವಾಗಿದೆ. - ಕೆ.ಕೆ. ನಾಗರಾಜಶೆಟ್ಟಿ