ಕುಶಾಲನಗರ ಮಡಿಕೇರಿ ರಸ್ತೆಯ ಅಂಚಿನಲ್ಲಿರುವ ಐತಿಹಾಸಿಕ ತಾವರೆಕೆರೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿ ಒಂದು ತಿಂಗಳ ಒಳಗಾಗಿ ಪ್ರಾರಂಭಿಸಿ ವರದಿ ನೀಡುವಂತೆ ಉಪ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಮಡಿಕೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಂಬAಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ದೂರುದಾರರ ಸಮ್ಮುಖದಲ್ಲಿ ನಡೆದ ವಿಚಾರಣಾ ಸಭೆಯಲ್ಲಿ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿದರು.

ಕಳೆದ ಎರಡು ವರ್ಷಗಳ ಹಿಂದೆ ಪತ್ರಿಕೆಯಲ್ಲಿ ತಾವರೆಕೆರೆ ದುಸ್ಥಿತಿಯ ಬಗ್ಗೆ ಪ್ರಕಟಗೊಂಡ ವಿಶೇಷ ವರದಿಯ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸುಮೋಟೋ ಪ್ರಕರಣ ದಾಖಲಿಸಿದ್ದರು.

ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ, ಕುಶಾಲನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕರು ಮತ್ತು ತಾಲೂಕು ತಹಶೀಲ್ದಾರ್ ಅವರುಗಳ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು ಈ ಸಂಬAಧ ಹಲವು ಬಾರಿ ವಿಚಾರಣೆ ನಡೆದಿದೆ.

ಶುಕ್ರವಾರ ನಡೆದ ಸಭೆಯಲ್ಲಿ ಉಪಲೋಕಾಯುಕ್ತರು ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳಿಂದ ಸಭೆಯಲ್ಲಿ ಮಾಹಿತಿ ಕೇಳಿದ್ದು ಒಂದು ತಿಂಗಳ ಒಳಗಾಗಿ ತಾವರೆಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಸಿ ವರದಿ ನೀಡುವಂತೆ ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ಸಣ್ಣ ನೀರಾವರಿ ಯೋಜನೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ತಾವರೆಕೆರೆ ಅಭಿವೃದ್ಧಿಗೆ ಕುಶಾಲನಗರ ಯೋಜನಾ ಪ್ರಾಧಿಕಾರ ಮೂಲಕ ಎರಡು ಕೋಟಿ ೯೪ ಲಕ್ಷ ರೂಗಳನ್ನು ಕಾಯ್ದಿರಿಸಲಾಗಿದೆ. ಸಣ್ಣ ನೀರಾವರಿ ಯೋಜನೆಯ ಅಧಿಕಾರಿಗಳ ಮೂಲಕ ಟೆಂಡರ್ ಪ್ರಕ್ರಿಯೆಗೆ ಅನುಮೋದನೆ ದೊರೆತಿದ್ದರೂ ಇದುವರೆಗೂ ಯಾವುದೇ ರೀತಿಯ ಸ್ಪಂದನೆ ಕಂಡುಬರದ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ಅಗತ್ಯ ಕ್ರಮ ಕೈಗೊಳ್ಳದೆ ಇದ್ದಲ್ಲಿ ಸಂಬAಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದರು.(ಮೊದಲ ಪುಟದಿಂದ) ಉತ್ತಮ ವಾತಾವರಣವನ್ನು ಸೃಷ್ಟಿಸಬೇಕೆಂದು ತಾಕೀತು ಮಾಡಿದರು.

ಇದೇ ಸಂದರ್ಭ ವೈದ್ಯಕೀಯ ತ್ಯಾಜ್ಯಗಳು ತುಂಬಿದ್ದ ಚೀಲಗಳು ಕಂಡುಬAದವು. ಇದನ್ನು ಗಮನಿಸಿದ ಉಪಲೋಕಾಯುಕ್ತರು ಪರಿಶೀಲಿಸಿ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು. ಈ ಸಂದರ್ಭ ಅಸುಪಾಸಿನ ನಿವಾಸಿಗಳು ಆಟೋದಲ್ಲಿ ಬಂದ ವ್ಯಕ್ತಿಯೊಬ್ಬರು ಕಸ ಹಾಕಿದ್ದು, ಪ್ರಶ್ನಿಸಿದ ಸಂದರ್ಭ ನಮ್ಮ ಜೊತೆ ವಾಗ್ವಾದ ನಡೆಸುತ್ತಾರೆ ಎಂದು ಮಾಹಿತಿ ನೀಡಿದರು. ತಕ್ಷಣ ವೀಡಿಯೋ ಸಾಕ್ಷಾö್ಯಧಾರ ಪಡೆದುಕೊಂಡ ಉಪಲೋಕಾಯುಕ್ತರು ಪ್ರಕರಣ ದಾಖಲಿಸಲು ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದರು. ಬಳಿಕ ಪೊಲೀಸರು ಪೌರಾಯುಕ್ತ ರಮೇಶ್ ಅವರು ನೀಡಿದ ದೂರಿನಡಿ ಪ್ರಕರಣ ದಾಖಲಿಸಿಕೊಂಡರು.

ಆರ್‌ಟಿಓ ಕಚೇರಿ ಖಾಲಿ ಖಾಲಿ

ಸದಾ ಜನರಿಂದ ಗಿಜಿಗುಡುತ್ತಿದ್ದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಇಂದು ಖಾಲಿ ಹೊಡೆಯುತ್ತಿತ್ತು. ಇದು ಉಪಲೋಕಾಯುಕ್ತರಲ್ಲಿ ಪ್ರಶ್ನೆಯನ್ನೂ ಮೂಡಿಸಿತು. ಆರ್‌ಟಿಓಗೆ ಭೇಟಿ ನೀಡಿ ಪರಿಶೀಲಿಸಿದ ಉಪಲೋಕಾಯುಕ್ತರು ತೆರಿಗೆ ಪಾವತಿಸದ ವಾಹನಗಳನ್ನು ವಶಪಡಿಸಿಕೊಳ್ಳಬೇಕು. ಕಡತ ವಿಲೇವಾರಿ ತಡವಾಗಬಾರದು ಎಂದು ಸೂಚಿಸಿದರು.

ಇದೇ ವೇಳೆ ಕಡತಗಳೊಂದಿಗೆ ಸಿಬ್ಬಂದಿಗಳ ಮೊಬೈಲ್, ಡಿಜಿಟಲ್ ಹಣ ಪಾವತಿ ಆ್ಯಪ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಆರ್‌ಟಿಓದಲ್ಲಿ ಸಾರ್ವಜನಿಕರೇ ಇಲ್ಲದ ಬಗ್ಗೆಯೂ ಪ್ರಶ್ನಿಸಿದರು.

ಮೆಡಿಕಲ್ ಕಾಲೇಜಿಗೆ ಭೇಟಿ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮೆಡಿಕಲ್ ಕಾಲೇಜು) ವಸತಿ ನಿಲಯಗಳಿಗೆ ಉಪಲೋಕಾಯುಕ್ತರು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.

ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ವಸತಿನಿಲಯಗಳಿಗೆ ಭೇಟಿ ನೀಡಿ ಅಲ್ಲಿನ ಅಡುಗೆ ಕೋಣೆ, ಮಲಗುವ ಕೊಠಡಿ, ಆಹಾರದ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಮಕ್ಕಳೊಂದಿಗೆ ಸಮಲೋಚನೆ ನಡೆಸಿ ಸಮಸ್ಯೆಗಳಿದ್ದರೆ ತಿಳಿಸುವಂತೆ ಹೇಳಿದರು. ಈ ವೇಳೆ ವಿದ್ಯುತ್ ಕಡಿತಗೊಂಡ ಸಂದರ್ಭ ಜನರೇಟರ್ ವ್ಯವಸ್ಥೆ ಇಲ್ಲ, ಕ್ರೀಡಾ ಚಟುವಟಿಕೆಗಳಿಲ್ಲ, ಬಟ್ಟೆ ಒಣಗಿಸಲು ವ್ಯವಸ್ಥೆಯಿಲ್ಲ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಹೇಳಿಕೊಂಡರು. ಪ್ರತಿ ಅಂತಸ್ತಿನಲ್ಲಿ ವಾಟರ್ ಫಿಲ್ಟರ್, ಅಗತ್ಯ ಔಷಧಿಗಳ ದಸ್ತಾನು, ವೈದ್ಯಕೀಯ ತಪಾಸಣೆ ನಡೆಸುವಂತೆ ಉಪಲೋಕಾಯುಕ್ತರು ಸೂಚಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶರಾದ ಕಿರಣ್ ಪಾಟೀಲ, ಲೋಕಾಯುಕ್ತ ಎಸ್ಪಿ ಉದೇಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ತಹಶೀಲ್ದಾರ್ ಶ್ರೀಧರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ, ನ್ಯೂರಾಲಜಿ ಹಾಗೂ ಯುರಿಯಾಲಜಿ ವಿಭಾಗ ಸೇರಿದಂತೆ ವೈದ್ಯಕೀಯ ಸೇವೆಗಳು ಅಭಿವೃದ್ಧಿಗೊಳ್ಳಬೇಕಾಗಿದ್ದು, ಈ ಬಗ್ಗೆ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಉಪಲೋಕಾಯುಕ್ತ ಫಣೀಂದ್ರ ಅವರು ತಿಳಿಸಿದರು.

ಜಿಲ್ಲಾಸ್ಪತ್ರೆ ಭೇಟಿ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಸ್ಪತ್ರೆ ಪೂರ್ಣವಾಗಿ ಹೈಟೆಕ್ ಆಸ್ಪತ್ರೆಯಾಗಿಲ್ಲ. ವ್ಯವಸ್ಥೆ ಚೆನ್ನಾಗಿದೆ ಎಂಬ ಅಭಿಪ್ರಾಯ ರೋಗಿಗಳಿಂದ ಬಂದಿದೆ. ಯಾವುದೇ ದೂರುಗಳು ಭೇಟಿ ಸಂದರ್ಭ ಬಂದಿಲ್ಲ. ಸಣ್ಣಪುಟ್ಟ ನ್ಯೂನತೆಗಳಿವೆ ಅದನ್ನು ಸರಿಪಡಿಸಬೇಕು. ಆಸ್ಪತ್ರೆ ಎಂಬುದು ದೇವಾಲಯವಿದ್ದಂತೆ. ಗುಡ್ಡಗಾಡಿನ ಜನರು ಹೆಚ್ಚಿರುವ ಕಾರಣದಿಂದ ವೈದ್ಯಕೀಯ ಸೇವೆ ಮತ್ತಷ್ಟು ಅಭಿವೃದ್ಧಿಯಾಗಬೇಕು. ತುರ್ತು ಚಿಕಿತ್ಸಾ ಸೌಲಭ್ಯಗಳು ದೊರೆತರೆ ಮೈಸೂರು, ಮಂಗಳೂರಿಗೆ ಹೋಗುವುದು ತಪ್ಪುತ್ತದೆ. ‘ಗೋಲ್ಡನ್ ಅವರ್’ನಲ್ಲಿ ಚಿಕಿತ್ಸೆ ಲಭಿಸಿದರೆೆ ಜೀವ ಉಳಿಸಬಹುದು. ದೂರದ ಊರಿಗೆ ತೆರಳಿ ಚಿಕಿತ್ಸೆ ಪಡೆಯುವುದು ಕಷ್ಟಸಾಧ್ಯ. ಆ್ಯಂಬ್ಯುಲೆನ್ಸ್ ಸಂಖ್ಯೆಯೂ ಕಡಿಮೆ ಇದೆ. ಇನ್ನೂ ೨ ಆ್ಯಂಬ್ಯುಲೆನ್ಸ್ ಖರೀದಿಸುವಂತೆ ಜಿಲ್ಲಾಧಿಕಾರಿಗೂ ಸೂಚಿಸಿದ್ದೇನೆ. ೨-೩ ತಿಂಗಳಿಗೊಮ್ಮೆ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿಯನ್ನು ಲೋಕಾಯುಕ್ತ ಅಧಿಕಾರಿಗಳ ಮೂಲಕ ಮಾಡಿಸುತ್ತೇನೆ ಎಂದು ಹೇಳಿದರು.