ಮಡಿಕೇರಿ, ಜು. ೫: ಎಸ್‌ಐಆರ್ ಕಾರ್ಯಕ್ರಮದಲ್ಲಿ ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿದರು. ಪೊನ್ನಂಪೇಟೆ ತಾಲೂಕು ಹುದಿಕೇರಿಯ ಬೆಳ್ಳೂರಿನಲ್ಲಿರುವ ಶಾಸಕರ ನಿವಾಸದಲ್ಲಿ ಎಸ್‌ಐಆರ್ ಅರ್ಜಿ ಭರ್ತಿ ಮಾಡುವ ಮೂಲಕ ಶಾಸಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಬಳಿಕ ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಇರಲೇಬೇಕು. ಮತದಾನ ಎಂಬುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಪ್ರಮುಖ ಹಕ್ಕು ಮತ್ತು ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅಲ್ಲದೆ ಯಾರೂ ಇದನ್ನು ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಕಸಿದುಕೊಳ್ಳದಂತೆ ನಾವುಗಳು ಜಾಗೃತಿ ವಹಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ನೀಡಿ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶಾಸಕರು ಕರೆ ನೀಡಿದರು.

ಈ ಸಂದರ್ಭ ಪೊನ್ನಂಪೇಟೆ ತಹಶೀಲ್ದಾರ್ ಸಂಜನಾ, ವೀರಾಜಪೇಟೆ ತಹಶೀಲ್ದಾರ್ ಪ್ರವೀಣ್, ಪ್ರಮುಖರಾದ ಪಟ್ಟಡ ರಂಜಿ ಪೂಣಚ್ಚ, ಅಜ್ಜಿಕುಟ್ಟಿರ ಗಿರೀಶ್, ಕುಂಡಚ್ಚಿರ ಮಂಜು ದೇವಯ್ಯ, ನರೇಂದ್ರ ಕಾಮತ್ ಉಪಸ್ಥಿತರಿದ್ದರು.