ಮಡಿಕೇರಿ, ಜೂ. ೬: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೮ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಕುಶಾಲನಗರದ ಪುರಸಭೆ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ - ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂ.ಸಂ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಸಾರ್ವಜನಿಕರು, ಕರ್ತವ್ಯ ಲೋಪ ಮಾಡುವ ಸರ್ಕಾರಿ, ಸಾರ್ವಜನಿಕ ನೌಕರರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಉಪಯೋಗಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ದಿನಕರ ಶೆಟ್ಟಿ ತಿಳಿಸಿದ್ದಾರೆ.