ಸಿದ್ದಾಪುರ, ಜು. ೬: ಕಾಡಾನೆಗಳ ಚಲನವಲನ ಕಂಡು ಹಿಡಿಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ವತಿಯಿಂದ ಮೂರು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅವುಗಳಿಗೆ ನಾಮಕರಣ ಮಾಡಲಾಗಿದೆ. ತಿತಿಮತಿ ವಲಯ ಹಾಗೂ ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟು ದಾಂಧÀಲೆ ನಡೆಸುತ್ತಿರುವುದು ಹೆಚ್ಚಾಗಿದೆ. ಆನೆ ಮಾನವ - ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಮೇರೆಗೆ ತಿತಿಮತಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಮೂರು ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆೆ. ಈ ಪೈಕಿ ಎರಡು ಗಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅವುಗಳಲ್ಲಿ ಒಂದಕ್ಕೆ ಅಯ್ಯಪ್ಪ ಹಾಗೂ ಮತ್ತೊಂದಕ್ಕೆ ಧರ್ಮ ಎಂದು ನಾಮಕರಣ ಮಾಡಿ ಅವುಗಳನ್ನು ಗುಂಪಿಗೆ ಸೇರ್ಪಡೆಗೊಳಿಸಲಾಗಿದೆ. ಇದಲ್ಲದೆ ಮತ್ತೊಂದು ಹೆಣ್ಣಾನೆಗೂ ಕೂಡ ರೇಡಿಯೋ ಕಾಲರ್ ಅಳವಡಿಸಲಾಗಿದ್ದು ಈ ಮೂರು ಕಾಡಾನೆಗಳನ್ನು ಕಾಡಾನೆಗಳ ಗುಂಪಿಗೆ ಸೇರಿಸಿ ಬಿಡಲಾಗಿದೆ. ರೇಡಿಯೋ ಕಾಲರ್ ಅಳವಡಿಸಲಾದ ಕಾಡಾನೆಗಳು ಗುಂಪಿನೊAದಿಗೆ ಸುತ್ತಾಡಿದರೆ ಅವುಗಳ ಮಾಹಿತಿಯು ಅರಣ್ಯ ಇಲಾಖೆ ಅಧಿಕಾರಿಗಳ ಮೊಬೈಲ್‌ಗಳಿಗೆ ಲಭಿಸುತ್ತದೆ. ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ಹಾಗೂ ಉಪವಲಯ ಅರಣ್ಯ ಅಧಿಕಾರಿಗಳು, ಸಿಬ್ಬಂದಿ ಸೇರಿ ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ನಡೆಸಿ ವನ್ಯಜೀವಿ ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ರೇಡಿಯೋ ಕಾಲರ್ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ. - ವಾಸು