ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭಗೊAಡಿದ್ದು, ನಿರಂತರವಾಗಿ ಮಳೆ ತೀವ್ರವಾಗುವ ಸಂದರ್ಭದಲ್ಲಿ ಶಾಲಾ - ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸುವ ವಿಚಾರಕ್ಕೆ ಸಂಬAಧಿಸಿದAತೆ ಈ ಬಾರಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅಧಿಕಾರಿಗಳ ತಂಡವೊAದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.
ನಿರಂತರ ಮಳೆ ಸಂದರ್ಭ ರಜೆ ಘೋಷಣೆ ಸೂಕ್ತವಾಗಿರುತ್ತದೆ ಎಂದಿರುವ ಅವರು ಈ ಬಗ್ಗೆ ತೀರ್ಮಾನಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಜಿಲ್ಲೆಯ ಐದು ತಾಲೂಕುಗಳ ತಹಶೀಲ್ದಾರರುಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ನಿರಂತರ ಮಳೆಯಾಗುವ ಪ್ರದೇಶ, ತಾಲೂಕು ವ್ಯಾಪ್ತಿಯಲ್ಲಿ ಅಗತ್ಯ ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ನಿಯಮಾನುಸಾರ ರಜೆ ಘೋಷಿಸಲು ಜಿಲ್ಲಾಧಿಕಾರಿ ಸೋಮಶೇಖರ್ ಅವರು ಸೂಚಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ರಜೆ ಘೋಷಿತ ದಿನಗಳ ಪಾಠ ಪ್ರವಚನಗಳನ್ನು ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳುವಂತೆಯೂ ಅವರು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದ್ದಾರೆ.