ಮಡಿಕೇರಿ, ಜು. ೬: ೨೦೨೬-೨೭ನೇ ಶೈಕ್ಷಣಿಕ ವರ್ಷಕ್ಕೆ ಕೊಡಗು ಜಿಲ್ಲೆಯ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ೧೧ನೇ ತರಗತಿ (ವಿಜ್ಞಾನ ಹಾಗೂ ವಾಣಿಜ್ಯ ವಿಭಾಗ) ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಲ್ಲಿ ಎಸ್ಎಸ್ಎಲ್ಸಿ - ೧೦ನೇ ತರಗತಿಯನ್ನು ಉತ್ತೀರ್ಣರಾಗಿದ್ದು, ಒಟ್ಟು ಕನಿಷ್ಟ ಶೇ. ೫೦ ಅಂಕಗಳು ಹಾಗೂ ಗಣಿತ ವಿಷಯದಲ್ಲಿ ಕನಿಷ್ಟ ಶೇ. ೫೦ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸಲು ತಾ. ೧೦ ಕೊನೆಯ ದಿನವಾಗಿದೆ. ಸರ್ಕಾರದ ನಿಯಮಾನುಸಾರ ಮೀಸಲಾತಿ ಸೌಲಭ್ಯಗಳು ಅನ್ವಯವಾಗುತ್ತವೆ. ಹೆಚ್ಚಿನ ಮಾಹಿತಿಗೆ ದೂ.ಸಂ. ೯೩೮೦೮೦೨೧೭೯, ೯೪೪೮೨೧೫೬೨೩ ರಲ್ಲಿ ಜವಾಹರ ನವೋದಯ ವಿದ್ಯಾಲಯವನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.