ಮಡಿಕೇರಿ, ಜು. ೬: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಇಟಿಣeಡಿಠಿಡಿeಟಿueಡಿshiಠಿ ಠಿಡಿogಡಿಚಿmme (ಇP) ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿರುತ್ತದೆ.

ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ೨ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ೧ ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಿದೆ. ೨೦೨೪-೨೫ನೇ ಸಾಲಿನಲ್ಲಿ ಬಾಕಿ ಉಳಿದಿರುವ ಪರಿಶಿಷ್ಟ ಜಾತಿ ೧ ಹಾಗೂ ಪರಿಶಿಷ್ಟ ಪಂಗಡದ ೧ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿರುತ್ತದೆ.

ಕೌಶಲ್ಯಾಭಿವೃದ್ಧಿ ತರಬೇತಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ತರಬೇತಿ ಅವಧಿ ಒಂದು ತಿಂಗಳು, ೨೦ ರಿಂದ ೪೫ ವರ್ಷದೊಳಗಿರಬೇಕು. ೨೦೨೪-೨೫ನೇ ಸಾಲಿನ ಬಾಕಿ ಪರಿಶಿಷ್ಟ ಜಾತಿ ೧, ಪರಿಶಿಷ್ಟ ಪಂಗಡ ೧, ೨೦೨೫-೨೬ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ೨ ಅಭ್ಯರ್ಥಿ, ಪರಿಶಿಷ್ಟ ಪಂಗಡದ ೧ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುವುದು.

ಅರ್ಜಿದಾರರು ಹೊಂದಿರಬೇಕಾದ ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು ೨೦ ರಿಂದ ೪೫ ವರ್ಷದೊಳಗಿರಬೇಕು. ಅರ್ಜಿದಾರರು ೧೦ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಲಘ ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ. ೨ ಲಕ್ಷ ಮೀರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ. ೧.೫೦ ಲಕ್ಷ ಮೀರಬಾರದು. ಅರ್ಜಿದಾರರು ಕೊಡಗು ಜಿಲ್ಲೆಯ ನಿವಾಸಿಯಾಗಿರಬೇಕು. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

ಅರ್ಜಿದಾರರು ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಕಚೇರಿಯಿಂದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರದೊಂದಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ಪ್ರತಿ, ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿ, ಖಾಯಂ ಲಘು ವಾಹನ ಚಾಲನಾ ಪರವಾನಗಿ ಪತ್ರದ ಪ್ರತಿ, ವಿದ್ಯಾರ್ಹತೆಯ ಬಗ್ಗೆ ಕನಿಷ್ಠ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ, ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆ/ ನಿಗಮ/ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣಿಕರಿಸಿ, ರೂ. ೫೦ ರ ಬೆಲೆಯ ಛಾಪಾ ಕಾಗದ ದಲ್ಲಿ ನಮೂನೆ-೩ರಲ್ಲಿ ಪ್ರಮಾಣ ಪತ್ರವನ್ನು ಸಲ್ಲಿಸುವುದು. ಅರ್ಜಿದಾರನು ಮೇಲಿನ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸತಕ್ಕದ್ದು. ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆಗಸ್ಟ್ ೪ ರವರೆಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ ಆಗಸ್ಟ್ ೪ ರ ಸಂಜೆ ೫ ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಗೆ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-೫೭೧೨೦೧ ದೂ.ಸಂ. ೦೮೨೭೨-೨೦೦೫೧೯ ಅಥವಾ ಇ-ಮೇಲ್ ಜಜಞoಜಚಿguಣouಡಿism@gmಚಿiಟ.ಛಿom ಗೆ ಸಂಪರ್ಕಿಸುವAತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.