ಮಡಿಕೇರಿ, ಜು. ೬: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. ೮ ರಂದು ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ವೀರಾಜಪೇಟೆ ಕಲ್ಯಾಣಿ ಮೋಟರ್ಸ್, ನೆಕ್ಸಾ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಕಲ್ಯಾಣಿ ಮೋಟರ್ಸ್, ನೆಕ್ಸಾ, ವೀರಾಜಪೇಟೆ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ ೮೨೯೬೦೨೦೮೨೬ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹೇಳಿದ್ದಾರೆ.