ಶನಿವಾರಸಂತೆ, ಜು. ೭: ಪಟ್ಟಣ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯ ಚುರುಕುಗೊಂಡಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಓ) ಮನೆಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ವಿತರಿಸಿ ಅರ್ಜಿ ಭರ್ತಿ ಮಾಡಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ನಿಯಮಾನುಸಾರ ಬಿಎಲ್ಓಗಳು ಮತದಾರರ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ಸರ್ಕಾರದ ಅಧಿಕೃತ ಸೂಚನಾ ಪ್ರತಿಯನ್ನು ಮನೆಗಳ ಗೋಡೆಗೆ ಅಂಟಿಸಿ, ಎಸ್ಐಆರ್ ಪ್ರತಿಯನ್ನು ವಿತರಿಸುತ್ತಿದ್ದಾರೆ. ಅಲ್ಲದೇ ಸ್ಥಳದಲ್ಲಿಯೇ ಮತದಾರರಿಂದ ಅಗತ್ಯ ಮಾಹಿತಿಯನ್ನು ಪಡೆದು ಅರ್ಜಿಗಳನ್ನು ಭರ್ತಿ ಮಾಡಿಕೊಂಡು ತೆರಳುತ್ತಿದ್ದಾರೆ.
ಪಟ್ಟಣದ ೩೫ನೇ ಮತಗಟ್ಟೆ ವ್ಯಾಪ್ತಿಯಲ್ಲಿ ಗ್ರಾಮ ಆಡಳಿತಾಧಿಕಾರಿ ಚಂದನ್ ಹಾಗೂ ಅಂಗನವಾಡಿ ಶಿಕ್ಷಕಿ ಧನಲಕ್ಷಿö್ಮ ಮತದಾರರ ಮನೆಗಳಿಗೆ ಭೇಟಿ ನೀಡಿ ಎಸ್ಐಆರ್ ಪ್ರತಿಗಳನ್ನು ವಿತರಿಸಿ, ಅಗತ್ಯ ವಿವರಗಳನ್ನು ಪಡೆದು ಅರ್ಜಿ ಭರ್ತಿ ಮಾಡಿಸುತ್ತಿದ್ದಾರೆ. ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಭೇಟಿ ನೀಡಿ ಕರ್ತವ್ಯ ನಿರ್ವಹಿಸುತ್ತಿರುವುದು ಕಂಡುಬAತು.