ಕುಶಾಲನಗರ, ಜು. ೭: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಟ ವೇತನ ಜಾರಿ ಮಾಡಲು ಒತ್ತಾಯಿಸಿ ತಾ. ೯ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕೊಡಗು ಜಿಲ್ಲೆಯಿಂದ ಬೆಂಗಳೂರು ಚಲೋ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಾಯಿತಿ ನೌಕರರಿಗೆ ಸರಕಾರದ ನಿಧಿಯಿಂದ ವೇತನ ನೀಡಬೇಕು, ಕನಿಷ್ಠ ವೇತನ ಕಾಯ್ದೆ ವ್ಯಾಪ್ತಿಗೆ ತರಬೇಕೆಂದು ಆಗ್ರಹಿಸಿ ಸಂಘಟನೆ ಹೋರಾಟ ನಡೆಸಿ ಯಶಸ್ವಿಯಾಗಿದೆ. ಇದೇ ರೀತಿ ವೇತನ ಪರಿಷ್ಕೃರಣೆಗೆ ಒತ್ತಾಯಿಸಿ ಕಳೆದ ನಾಲ್ಕೆöÊದು ವರ್ಷಗಳಿಂದ ಸಿಐಟಿಯುನ ಜಂಟಿ ಹೋರಾಟದ ಫಲವಾಗಿ ೨೦೨೫ರ ಜುಲೈ ೨೨ರಂದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರಕಾರ ವೇತನ ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಆದರೆ ಇದರ ಫಲ ಇದುವರೆಗೆ ಪಂಚಾಯಿತಿ ನೌಕರರಿಗೆ ತಲುಪಿಲ್ಲ.

ರಾಜ್ಯದ ಈಗಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಾರದೇ ಒತ್ತಡಕ್ಕೆ ಮಣಿಯದೆ ಅಧಿಸೂಚನೆಯನ್ನು ಕಾರ್ಯರೂಪಕ್ಕೆ ತರಬೇಕಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ರಂಗಸ್ವಾಮಿ ಪಿ ಇದ್ದರು.