ಕುಶಾಲನಗರ, ಜು. ೭: ಕುಶಾಲನಗರ ಮಡಿಕೇರಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ತಪ್ಪು ಮಾಹಿತಿ ನೀಡಿ ಮಹಿಳೆಯೊಬ್ಬರಿಗೆ ಗರ್ಭಪಾತ ಮಾಡಿಸಿರುವ ಪ್ರಕರಣದ ಬಗ್ಗೆ ಮಹಿಳಾ ಆಯೋಗ ಮಾನವ ಹಕ್ಕುಗಳ ಆಯೋಗ ಗಳ ದೂರು ಹಿನ್ನೆಲೆಯಲ್ಲಿ ತನಿಖೆ ಮಾಡಲು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸತೀಶ್ ನೇತೃತ್ವದಲ್ಲಿ ತಜ್ಞ ವೈದ್ಯರ ತಂಡ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ.
ಮೇ ತಿಂಗಳ ಅವಧಿಯಲ್ಲಿ ಆಸ್ಪತ್ರೆಗೆ ಮಹಿಳೆಯೊಬ್ಬರನ್ನು ಸಹೋದರನ ಹೆಸರಿನಲ್ಲಿ ಕರೆತಂದು ಗರ್ಭಪಾತ ಮಾಡಿರುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಕುಶಾಲನಗರ ಪೊಲೀಸ್ ಠಾಣೆಗೆ ದೂರುಗಳು ಬಂದಿದ್ದು ಈ ಬಗ್ಗೆ ಆಸ್ಪತ್ರೆಯ ವೈದ್ಯರು ಮತ್ತು ಆಡಳಿತ ಮಂಡಳಿಯಿAದ ದಾಖಲೆಗಳು ಹಾಗೂ ಸಂಪೂರ್ಣ ಮಾಹಿತಿಯನ್ನು ವೈದ್ಯರ ತಂಡ ಸಂಗ್ರಹಿಸಿದ್ದು ಪ್ರಕರಣದ ಲೋಪ ದೋಷಗಳ ಬಗ್ಗೆ ಪತ್ತೆಹಚ್ಚಲು ಜಿಲ್ಲೆಯ ಮಹಿಳಾ ವೈದ್ಯರ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಸತೀಶ್ ತಿಳಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಯ ಸರ್ಜನ್ ನಂಜುAಡಯ್ಯ, ಡಾ ಸನತ್ ಕುಮಾರ್ ಮತ್ತು ತಾಲೂಕು ವೈದ್ಯಾಧಿಕಾರಿ ಡಾ ಇಂದೂಧರ್ ಖಾಸಗಿ ಆಸ್ಪತ್ರೆಯ ವೈದ್ಯರಾದ ಡಾ. ಸ್ವಸ್ತಿಕ ಅವರಿಂದ ಪ್ರಕರಣದ ಸಂಪೂರ್ಣ ದಾಖಲೆ ಮತ್ತು ಮಾಹಿತಿಯನ್ನು ಪಡೆದರು.
ಪ್ರಕರಣದ ಬಗ್ಗೆ ಈಗಾಗಲೇ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಹಿಳಾ ಆಯೋಗದ ಸದಸ್ಯರು ದೂರು ನೀಡಿದ್ದು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.