ಸೋಮವಾರಪೇಟೆ, ಜು. ೭: ತಾ. ೨೨ ರಿಂದ ಅಕ್ಟೋಬರ್ ೭ರ ವರೆಗೆ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ತಿಳಿಸಿದ್ದಾರೆ.
ಈ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಸಂಬAಧಿಸಿದAತೆ ಪ್ರತಿಯೊಂದು ಕುಟುಂಬದಲ್ಲಿ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ದಾಖಲಾತಿಗಳು ಅವಶ್ಯಕತೆ ಇರುತ್ತದೆ. ಯಾವುದೇ ಕುಟುಂಬವು ಈ ಸಮೀಕ್ಷೆಯಿಂದ ಹೊರಗೆ ಉಳಿಯಬಾರದೆಂಬ ಉದ್ದೇಶ ಹೊಂದಲಾಗಿದೆ. ಆಧಾರ್ ಕಾರ್ಡ್ ಇಲ್ಲದವರು ನೂತನ ಆಧಾರ್ ಕಾರ್ಡ್ ಮಾಡಿಸಿಕೊಳ್ಳಬೇಕು. ಆಧಾರ್ ಕಾರ್ಡಿನಲ್ಲಿ ತಿದ್ದುಪಡಿ, ದೂರವಾಣಿ ಸಂಖ್ಯೆ ಜೋಡಣೆ ಆಗದವರು ಸ್ಥಳೀಯ ಅಂಚೆ ಕಚೇರಿ ಅಥವಾ ಆಧಾರ್ ನೋಂದಣಿ ಕೇಂದ್ರಗಳಿಗೆ ತೆರಳಿ, ನೂತನ ಆಧಾರ್ ಕಾರ್ಡ್ ಪಡೆಯುವುದು ಮತ್ತು ತಿದ್ದುಪಡಿ ಮಾಡಿಸಿಕೊಳ್ಳಬೇಕೆಂದು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಮನವಿ ಮಾಡಿದ್ದಾರೆ.