ನಾಪೋಕ್ಲು, ಜು. ೭: ಸಮಗ್ರ ಮತಪಟ್ಟಿ ಪರಿಷ್ಕರಣೆಗೆ ಸಂಬAಧಿಸಿದAತೆ ಇಲ್ಲಿಗೆ ಸಮೀಪದ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದ ಬಳಿ ಸಾರ್ವಜನಿಕರ ಅನುಕೂಲಕ್ಕಾಗಿ ಹೆಲ್ಪ್ ಡೆಸ್ಕ್ ಅನ್ನು ಗುರುವಾರ ಉದ್ಘಾಟಿಸಲಾಯಿತು.
ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಮತ್ತು ವಲಯ ಅಧ್ಯಕ್ಷ ಕುಶಾಲಪ್ಪ ಮಾತನಾಡಿ, ನಾಪೋಕ್ಲು ಮತ್ತು ಬೇತು ಗ್ರಾಮದ ಮತದಾರರ ಅನುಕೂಲಕ್ಕಾಗಿ ಹೆಲ್ಪ್ ಡೆಸ್ಕ್ ಅನ್ನು ತೆರೆಯಲಾಗಿದೆ. ಮತದಾರರ ಪಟ್ಟಿ ಪರಿಶೀಲನೆಗೆ ಸಂಬAಧಿಸಿದAತೆ ಈ ವ್ಯಾಪ್ತಿಯ ಮತದಾರರು ಅಗತ್ಯವಿರುವ ಮಾಹಿತಿಗಳನ್ನು ಇಲ್ಲಿಂದ ಪಡೆಯಬಹುದಾಗಿದೆ ಎಂದರು.
ಈ ಸಂದರ್ಭ ಗ್ಯಾರಂಟಿ ಸಮಿತಿ ಸದಸ್ಯ ಆರಾಫಾತ್ ಪಿ ಎಮ್, ವಲಯ ಕಾಂಗ್ರೆಸ್ ಸದಸ್ಯರಾದ ಕರೀಂ, ಸಾದುಲಿ, ಹಾರಿಸ್, ಬಷೀರ್, ಬಿಎಲ್ಓ ರಝಕ್ ಇನ್ನಿತರರು ಉಪಸ್ಥಿತರಿದ್ದರು.