ಮಡಿಕೇರಿ, ಜು. ೭: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ರಸ್ತೆಗಳ ಅಂಚುಗಳು ಸಡಿಲಗೊಂಡು ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ತಾ. ೯ ರವರೆಗೆ ಜಾರಿಯಲ್ಲಿದ್ದ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರದ ನಿಷೇಧಾಜ್ಞೆಯನ್ನು ಆ. ೭ ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.