ಮುಳ್ಳೂರು, ಜು. ೭: ಸಮೀಪದ ನಿಡ್ತ ಸರಕಾರಿ ಪ್ರೌಢಶಾಲೆಯ ನಿಸರ್ಗ ಇಕೋ ಕ್ಲಬ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಎಂ.ಸಿ. ನಳಿನಿ ವನಮಹೋತ್ಸವ ಆಚರಣೆ ಮತ್ತು ಹಿನ್ನಲೆ ಹಾಗೂ ದಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ದಿನದ ಅಂಗವಾಗಿ ಶಾಲೆಗೆ ಸೇರಿದ ಜಾಗದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.