ಕುಶಾಲನಗರ, ಜು.೭: ಕುಶಾಲನಗರ ಅರಣ್ಯ ಇಲಾಖೆ ಮತ್ತು ಕುಶಾಲನಗರ ಕಾವೇರಿ ಪರಿಸರ ರಕ್ಷಣಾ ಬಳಗದ ಸಹಯೋಗದೊಂದಿಗೆ ನಡೆದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ಜನ್ಮ ದಿನಾಚರಣೆ ಹಾಗೂ ವಿದ್ಯಾರ್ಥಿಗಳೊಂದಿಗೆ ಪರಿಸರ ಮಾಹಿತಿ ಸಂವಾದ ಕಾರ್ಯಕ್ರಮದಲ್ಲಿ ಕುಶಾಲನಗರ ರೋಟರಿ ನಿರ್ಗಮಿತ ಅಧ್ಯಕ್ಷರು ಹಾಗೂ ಪರಿಸರ ಪ್ರೇಮಿ ಉದ್ಯಮಿ ಮನು ಪೆಮ್ಮಯ್ಯ ದಂಪತಿ ಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಸೋಮವಾರಪೇಟೆ ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ನವೀನ್ ಕುಮಾರ್, ಪರಿಸರ ತಜ್ಞರಾದ ಭಜನ್ ಬೋಪಣ್ಣ, ಭಾರತ ಮಾತಾ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಫಾ. ಪ್ರಧೀಶ್, ಪರಿಸರ ಲಕ್ಷಣ ಬಳಗದ ಸಂಚಾಲಕ ಎಂ ಎನ್ ಚಂದ್ರಮೋಹನ್, ಮಂಡೆಪAಡ ಬೋಸ್ ಮೊಣ್ಣಪ್ಪ, ಬಳಗದ ಪ್ರಮುಖರು, ವಿದ್ಯಾರ್ಥಿಗಳು ಇದ್ದರು.