ಕೂಡಿಗೆ, ಜು. ೮: ಕೂಡಿಗೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆ ಹಾಗೂ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಎರಡು ದಿನಗಳ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ರಾಷ್ಟಿçÃಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ತಂಡದ ವೈದ್ಯಾಧಿಕಾರಿಗಳಾದ ಡಾ. ಪೂಜಿತ್ ಹಾಗೂ ಡಾ. ನಿವೇದಿತಾ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ, ಶುಶ್ರೂಷಾಧಿಕಾರಿಗಳಾದ ಪ್ರೇಮ ಮತ್ತು ನೇತ್ರ, ಸಹಾಯಕರಾದ ನಮೃತ ಸೇರಿದಂತೆ ಆರೋಗ್ಯ ಸಿಬ್ಬಂದಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದರು. ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಹಿಮೋಗ್ಲೋಬಿನ್ ಪರೀಕ್ಷೆ, ಕಣ್ಣಿನ ತಪಾಸಣೆ ಹಾಗೂ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಪರಿಶೀಲನೆ ನಡೆಸಲಾಯಿತು. ಜೊತೆಗೆ ವೈಯಕ್ತಿಕ ಸ್ವಚ್ಛತೆ, ಆರೋಗ್ಯಕರ ಜೀವನಶೈಲಿ ಮತ್ತು ಆರೋಗ್ಯ ಸಂರಕ್ಷಣೆಯ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದ ಉಸ್ತುವಾರಿಯನ್ನು ಶಾಲಾ ಆರೋಗ್ಯ ಅಧಿಕಾರಿ ಎಂ.ಆರ್. ಮೀನಾ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಕೆ.ಆರ್. ಭಾರತಿ ಹಾಗೂ ಶಾಲೆಯ ಶಿಕ್ಷಕ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.