ಗೋಣಿಕೊಪ್ಪಲು, ಜು. ೮: ದಕ್ಷಿಣ ಕೊಡಗಿನ ಹೃದಯ ಭಾಗವಾಗಿರುವ ವಾಣಿಜ್ಯ ನಗರ ಗೋಣಿಕೊಪ್ಪಲುವಿಗೆ ಇದೀಗ ಹೊಸ ಕಳೆ ಬಂದಿದೆ. ಹಲವು ವರ್ಷಗಳ ಸಾರ್ವಜನಿಕರ ನಿರೀಕ್ಷೆಯಾಗಿದ್ದ ಹೈಟೆಕ್ ಬಸ್ ನಿಲ್ದಾಣದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಮಾಜಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ೫೨ನೇ ಹುಟ್ಟುಹಬ್ಬದ ದಿನವಾದ ತಾ. ೯ ರಂದು (ಇಂದು) ನೂತನ ಹೈಟೆಕ್ ಬಸ್ ನಿಲ್ದಾಣ ಲೋಕಾರ್ಪಣೆಗೊಳ್ಳುತ್ತಿರುವುದು ವಿಶೇಷವಾಗಿದೆ.
ಶಿಥಿಲಗೊಂಡಿದ್ದ ಪ್ರಯಾಣಿಕರ ತಂಗುದಾಣವನ್ನು ದಶಕಗಳ ಹಿಂದೆ ಕೆಡವಲಾಗಿತ್ತು. ಆದರೆ, ನಿರ್ಮಾಣ ಕಾರ್ಯ ಮಾತ್ರ ನೆನೆಗುದಿಗೆ ಬಿದ್ದಿತ್ತು. ಗೋಣಿಕೊಪ್ಪಲಿನಲ್ಲಿ ಸುಸಜ್ಜಿತ ಬಸ್ ನಿಲ್ದಾಣದ ಕೊರತೆಯಿಂದ ಕಳೆದ ೧೦ ವರ್ಷಗಳಿಂದ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರು ಹಾಗೂ ಸ್ಥಳೀಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಅವರು ಗೋಣಿಕೊಪ್ಪಲಿನಲ್ಲಿ ಹೈಟೆಕ್ ಮಾದರಿಯ ಬಸ್ ನಿಲ್ದಾಣ ನಿರ್ಮಿಸುವ ಭರವಸೆ ನೀಡಿದ್ದರು. ಶಾಸಕರಾದ ಬಳಿಕ ಸರಕಾರದಿಂದ ಅಗತ್ಯ ಅನುದಾನ ಬಿಡುಗಡೆಗೊಳಿಸಿ ಬೃಹತ್ ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಯೋಜನೆಯಡಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸುವ ಮೂಲಕ ದಶಕಗಳ ಕನಸು ನನಸಾಗಿದೆ.
ನೂತನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸುತ್ತಮುತ್ತ ೧೬ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಪ್ರತ್ಯೇಕ ಸುಸಜ್ಜಿತ ಶೌಚಾಲಯ ನಿರ್ಮಿಸಲಾಗಿದೆ. ಗೋಣಿಕೊಪ್ಪಲಿಗೆ ಉತ್ತಮ ಬಸ್ ನಿಲ್ದಾಣ ಬೇಕೆಂಬ ಸಾರ್ವಜನಿಕರು ಹಾಗೂ ಪ್ರಯಾಣಿಕರ ಬಹುದಿನಗಳ ಬೇಡಿಕೆ ಇದೀಗ ಈಡೇರಲಿದೆ. ಸ್ವಾತಂತ್ರö್ಯ ಹೋರಾಟಗಾರರ ಸೇವೆಯನ್ನು ಸ್ಮರಿಸುವ ಮಹತ್ವದ ಹೆಜ್ಜೆಯಾಗಿ ಗೋಣಿಕೊಪ್ಪಲಿನ ನೂತನ ಹೈಟೆಕ್ ಬಸ್ ನಿಲ್ದಾಣಕ್ಕೆ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದ ಸ್ವಾತಂತ್ರö್ಯ ಹೋರಾಟಗಾರ ಕೊಳ್ಳಿಮಾಡ ಕರುಂಬಯ್ಯ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ಬಸ್ ನಿಲ್ದಾಣದ ಒಂದು ಭಾಗದಲ್ಲಿ ಮಹಾನ್ ವ್ಯಕ್ತಿಗಳ ಪುತ್ಥಳಿಗಳನ್ನು ಅನಾವರಣಗೊಳಿಸಲಾಗುತ್ತಿದೆ. ಸಂವಿಧಾನ ಶಿಲ್ಪಿ ಭಾರತ ರತ್ನ ಬಿ.ಆರ್. ಅಂಬೇಡ್ಕರ್ ಹಾಗೂ ಕೊಡಗಿನ ಗಾಂಧಿ ಎಂದೇ ಪ್ರಸಿದ್ದರಾದ ಪಂದ್ಯAಡ ಬೆಳ್ಯಪ್ಪ ಅವರ ಭವ್ಯ ಪುತ್ಥಳಿಗಳು ಇಲ್ಲಿ ತಲೆಎತ್ತಲಿದೆ. - ಹೆಚ್.ಕೆ. ಜಗದೀಶ್