ಕೂಡಿಗೆ, ಜು. ೮: ನಾವು ಪರಿಸರಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆ ಉಂಟಾಗದAತೆ ಭವಿಷ್ಯತ್ತಿಗಾಗಿ ಜೀವ ಸಂಕುಲವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಪ್ರಾಂಶುಪಾಲರೂ ಆದ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಅಭಿವೃದ್ಧಿ) ರಾಮಚಂದ್ರರಾಜೇ ಅರಸ್ ಹೇಳಿದರು.

ವಿಶ್ವ ಪರಿಸರ ದಿನಾಚರಣೆ ಮಾಸಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್, ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ‘ನಮ್ಮ ನಡೆ ಹಸಿರೆಡೆಗೆ- ಪರಿಸರಕ್ಕಾಗಿ ನಾವು’ ಮಕ್ಕಳ ಪರಿಸರ ಸಂಭ್ರಮ:೨೦೨೬ ರ ಅಂಗವಾಗಿ ನಡೆದ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಿ ಪರಿಸರ ಮತ್ತು ಅರಣ್ಯ ಸಂರಕ್ಷಣೆಯ ಮಹತ್ವ ಕುರಿತು ಮಾತನಾಡಿದರು. ನಾವು ಪರಿಸರಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆಯನ್ನುಂಟು ಮಾಡದೇ ಪರಿಸರ ಸಂರಕ್ಷಣೆಗೆ ಪಣತೊಡಬೇಕಿದೆ ಎಂದರು. ಶಿಕ್ಷಕರು ತಮ್ಮ ಶಾಲೆ ಹಾಗೂ ಸುತ್ತಲಿನ ಪರಿಸರದಲ್ಲಿ ಮಕ್ಕಳಿಂದ ಹೆಚ್ಚು ಗಿಡ-ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಅವರಲ್ಲಿ ಪರಿಸರ ಕಾಳಜಿ ಬೆಳೆಸಿ ಉತ್ತಮ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು.

ಪರಿಸರಕ್ಕಾಗಿ ನಾವು ಕಾರ್ಯಕ್ರಮದ ಮಹತ್ವದ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ನಮ್ಮ ಭವಿಷ್ಯದ ಪೀಳಿಗೆಗೆ ನಾವು ಆಸ್ತಿ-ಪಾಸ್ತಿಯನ್ನು ಬಿಟ್ಟು ಹೋಗುವುದಕ್ಕಿಂತ ಹೆಚ್ಚಾಗಿ, ಶುದ್ಧ ಗಾಳಿ, ತಿಳಿ ನೀರು ಮತ್ತು ಹಸಿರು ಪರಿಸರವನ್ನು ಉಳಿಸಿಕೊಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

ಅರಣ್ಯ ಇಲಾಖೆ ವತಿಯಿಂದ ವಿದ್ಯಾರ್ಥಿಗೊಂದು ಗಿಡ- ಶಾಲೆಗೊಂದು ವನ ಕಾರ್ಯಕ್ರಮದಡಿ ಶಾಲೆಗಳಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ‘ಮನೆಗೊಂದು ಮರ - ಊರಿಗೊಂದು ವನ’ ಎಂಬ ಘೋಷವಾಕ್ಯದೊಂದಿಗೆ ನಮ್ಮ ಪರಿಸರದಲ್ಲಿ ಪ್ರತಿಯೊಬ್ಬರೂ ಗಿಡ ನೆಟ್ಟು ಬೆಳೆಸುವ ದೃಢ ಸಂಕಲ್ಪ ತೊಡಬೇಕಿದೆ ಎಂದರು.

ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ಪರಶಿವಮೂರ್ತಿ, ಪ್ರಾಧ್ಯಾಪಕ ಡಾ. ಸೀನಪ್ಪ, ವಿಜ್ಞಾನ ಸಂವಹನಾಕಾರ ಜಿ. ಶ್ರೀನಾಥ್, ಡಾ. ಜೆ. ಸೋಮಣ್ಣ ಮಾತನಾಡಿದರು. ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎನ್. ಪವನ್ ಕುಮಾರ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಜಿ. ಕುಮಾರ್, ಮಾಜಿ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಕಾರ್ಯದರ್ಶಿ ಎಂ.ಎಸ್. ಮಹೇಂದ್ರ, ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಸಂಘದ ತಾಲೂಕು ಕಾರ್ಯದರ್ಶಿ ಟಿ.ವಿ. ಶೈಲಾ, ಶಾಲೆಯ ಹಿರಿಯ ಶಿಕ್ಷಕ ಕೆ. ಗೋಪಾಲಕೃಷ್ಣ , ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವಕಾಮತ್, ಜಿಲ್ಲಾ ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮಾಥ್ಯೂ, ಡಾ. ಜೆ. ಸೋಮಣ್ಣ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಎಸ್.ಎ. ಯೋಗೇಶ್, ಹೆಚ್.ಎಸ್. ಸುಜಾತ, ಕೆ.ಡಿ. ನವೀನ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ, ಜವರಯ್ಯ, ಸದಸ್ಯೆ ಹೇಮಾವತಿ, ಎಂ.ಎನ್. ವೆಂಕಟನಾಯಕ್, ಅಂಜೆಲಾ ವಿದ್ಯಾನಿಕೇತನ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಅನಿತಾ ಡಿಸೋಜ, ಜಿಲ್ಲಾ ಸ್ಕೌಟ್ಸ್-ಗೈಡ್ಸ್ನ ಪ್ರಮುಖರಾದ ಸಿ.ಎಂ. ಸುಲೋಚನಾ, ಯು.ಸಿ. ದಮಯಂತಿ, ಡಿ.ವಿ. ಗಣೇಶ್, ಶಿಕ್ಷಕರು ಇದ್ದರು. ಇದಕ್ಕೂ ಮೊದಲು ಶಾಲಾವರಣದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅರಣ್ಯ ಸಸಿ ನೆಡುವ ಮೂಲಕ ಜಿಲ್ಲೆಯ ಪರಿಸರ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿದರು. ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಪ್ರವಾಸೋದ್ಯಮಿ ಕೆ.ಕೆ. ಮಂಜುನಾಥ್ ಕುಮಾರ್, ಗ್ರಾಮದ ಮುಖಂಡರಾದ ಜವರೇಗೌಡ, ಕೆ.ಎಸ್. ರಾಜಾಚಾರಿ ಇತರರು ಇದ್ದರು