ನಾಪೋಕ್ಲು, ಜು. ೮ : ಸಮೀಪದ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಇಎಲ್‌ಸಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಮೂರ್ನಾಡು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹಾಗೂ ಚುನಾವಣಾ ತರಬೇತುದಾರ ಪ್ರಶಾಂತ್ ವಿದ್ಯಾರ್ಥಿಗಳಿಗೆ ಮತದಾರ ಪಟ್ಟಿಯ ಬಗ್ಗೆ ಮಾಹಿತಿ ನೀಡಿ ತಮ್ಮ ಮನೆಯ ಸುತ್ತಮುತ್ತಲಿನ ಜನರಿಗೆ ಜಾಗೃತಿಯನ್ನು ಮೂಡಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ. ದೇವಕ್ಕಿ ಹಾಗೂ ಉಪನ್ಯಾಸಕರು ಹಾಜರಿದ್ದರು.