ಸೋಮವಾರಪೇಟೆ, ಜು. ೮: ಭಾರತೀಯ ಸೇನೆಯ ಮರಾಠ ಲೈಟ್ ಇನ್ಫೆಂಟ್ರಿಯಲ್ಲಿ ೨೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಹೆಗ್ಗುಳ ಗ್ರಾಮದ ಸುಬೇದಾರ್ ಹೆಚ್.ಎ. ಸತೀಶ್ ಅವರನ್ನು ನಂದಿಗುAದ ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸತೀಶ್ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಅಭಿನಂದಿಸಲಾಯಿತು. ಈ ವೇಳೆ ಮಾತನಾಡಿದ ಸತೀಶ್, ದೇಶಸೇವೆ ಎಂಬುದು ಪ್ರತಿಯೊಬ್ಬ ಸೈನಿಕನ ಪಾಲಿಗೆ ಅತ್ಯುನ್ನತ ಕರ್ತವ್ಯವಾಗಿದೆ. ಸೇನೆಯಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಭಾರತದ ವಿವಿಧ ಭಾಗಗಳೂ ಸೇರಿದಂತೆ ವಿದೇಶಗಳಲ್ಲೂ ಕಾರ್ಯನಿರ್ವಹಿಸುವ ಅವಕಾಶ ದೊರೆತಿದ್ದು, ಶಿಸ್ತು, ತ್ಯಾಗ ಮತ್ತು ದೇಶಪ್ರೇಮವೇ ಸೈನಿಕ ಜೀವನದ ಮೂಲ ಮೌಲ್ಯಗಳಾಗಿವೆ ಎಂದು ಹೇಳಿದರು. ತಮ್ಮ ಸೇವಾ ಅವಧಿಯಲ್ಲಿ ಕುಟುಂಬದವರು ಹಾಗೂ ಗ್ರಾಮಸ್ಥರು ನೀಡಿದ ಪ್ರೋತ್ಸಾಹ ಮತ್ತು ಸಹಕಾರವನ್ನು ಸ್ಮರಿಸಿದ ಅವರು, ನಿವೃತ್ತಿಯ ಬಳಿಕವೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಯುವಜನರಲ್ಲಿ ದೇಶಭಕ್ತಿ, ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಸತೀಶ್ ಅವರ ಸೇವೆಯನ್ನು ನಾವೆಲ್ಲಾ ಗೌರವಿಸುತ್ತೇವೆ. ಗ್ರಾಮಕ್ಕೆ ಹೆಮ್ಮೆ ತಂದಿರುವ ಅವರ ಸಾಧನೆ ಇತರ ಯುವಕರಿಗೆ ಸ್ಫೂರ್ತಿದಾಯಕವಾಗಿದೆ ಎಂದು ನಿವೃತ್ತ ಶಿಕ್ಷಕ ಎನ್.ಎಸ್. ರಾಜಪ್ಪ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಶ್ರೀ ನಂಜುAಡೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎನ್.ಎಚ್.ಸುದರ್ಶನ್, ಕಾರ್ಯದರ್ಶಿ ಎನ್.ಕೆ.ಮಂಜುನಾಥ್, ಹಿರಿಯರಾದ ನಿಂಗಸ್ವಾಮಿ, ಪಾಲಾಕ್ಷ, ಅರ್ಚಕ ಶಿವಮೂರ್ತಿ, ಪ್ರತಾಪ್, ಗೋಪಿ ಸೇರಿದಂತೆ ಇತರರು ಇದ್ದರು.