ಸೋಮವಾರಪೇಟೆ, ಜು. ೮: ಹಚ್ಚಹಸಿರಿನ ಗಿರಿಕಂದರಗಳ ಸಾಲು, ಬೆಟ್ಟದ ತುದಿಯನ್ನು ಸ್ಪರ್ಶಿಸಿ ತೇಲುವ ಮೋಡಗಳು.., ಸುತ್ತಲೂ ಹಸಿರನ್ನೇ ಹೊದ್ದು ಮಲಗಿರುವಂತೆ ಕಾಣುವ ಪ್ರದೇಶ.., ಎರಡೂ ಬದಿಯಲ್ಲಿ ಬೆಟ್ಟ..,ನಡುವೆ ಹಾಲಿನ ಹೊಳೆಯಂತೆ ಹರಿಯುತ್ತಿರುವ ಜಲಧಾರೆಯ ವೈಭವ.., ಜುಳುಜುಳು ನಾದದೊಂದಿಗೆ ಕಣ್ಮನ ತಣಿಸುವ ಸೌಂದರ್ಯದ ಜಲಕನ್ಯೆ ಮಲ್ಲಳ್ಳಿ ಜಲಪಾತ ಮಳೆಗೆ ಮೈದಳೆದಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಪುಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿರುವದರಿಂದ ಮಲ್ಲಳ್ಳಿ ಜಲಪಾತ ದಿನದಿಂದ ದಿನಕ್ಕೆ ತನ್ನ ಸೌಂದರ್ಯವನ್ನು ದ್ವಿಗುಣಗೊಳಿಸಿಕೊಳ್ಳುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ತನ್ನತ್ತ ಕರೆಯುತ್ತಿದೆ.

ಮುಂಗಾರಿನ ವಿಳಂಬದಿAದಾಗಿ ಈಗಷ್ಟೇ ತನ್ನ ಸೌಂದರ್ಯವನ್ನು ಇಮ್ಮಡಿಸಿಕೊಳ್ಳುತ್ತಿರುವ ಮಲ್ಲಳ್ಳಿ ಜಲಧಾರೆಯನ್ನು ನೋಡಲು ಸಾವಿರಾರು ಮಂದಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿದ್ದಾರೆ.

ನಿಸರ್ಗ ರಮಣೀಯತೆಯನ್ನು ತನ್ನೊಡಲಲ್ಲಿರಿಸಿಕೊಂಡಿರುವ ಪುಷ್ಪಗಿರಿ ಬೆಟ್ಟತಪ್ಪಲಿನಲ್ಲಿ ಹುಟ್ಟುವ ಕುಮಾರಧಾರಾ ನದಿ ಮಲ್ಲಳ್ಳಿ ಗ್ರಾಮದ ಬೃಹತ್ ಕಲ್ಲು ಬಂಡೆಯಿAದ ಕೆಳಭಾಗಕ್ಕೆ ಭೋರ್ಗರೆಯುತ್ತಾ ಧುಮುಕಿ ಜಲಧಾರೆಯಾಗಿ ಪ್ರವಹಿಸುವ ದೃಶ್ಯ ಮನಮೋಹಕವಾಗಿದೆ. ಜಲಪಾತದ ಮೇಲ್ಭಾಗದಲ್ಲಿರುವ ಬೃಹತ್ ಗಾತ್ರದ ಕಲ್ಲುಗಳು ಅತ್ಯಂತ ಆಕರ್ಷಣೀಯ ಸ್ಥಳವಾಗಿದ್ದು, ಇಲ್ಲಿ ನಿಂತು ಜಲಪಾತದ ಸೌಂದರ್ಯವನ್ನು ಕಣ್ಮುಂಬಿಕೊಳ್ಳುತ್ತಾ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಜಲಪಾತದ ಅಂದವನ್ನು ಸೆರೆಹಿಡಿದು ಪ್ರವಾಸಿಗರು ಸಂಭ್ರಮಿಸುತ್ತಿದ್ದಾರೆ. ಗೆಳೆಯರೊಂದಿಗೆ ಸೆಲ್ಫಿ ತೆಗೆದುಕೊಂಡು ಪ್ರಕೃತಿ ಸೌಂದರ್ಯಕ್ಕೆ ಮಾರುಹೋಗುತ್ತಿದ್ದಾರೆ.

ಕೊಡಗು ಸೇರಿದಂತೆ ಹೊರ ಜಿಲ್ಲೆಗಳ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವದು ವಿಶೇಷವಾಗಿದೆ. ರಾಜಧಾನಿ ಬೆಂಗಳೂರಿನಿAದಲೇ ಅತೀ ಹೆಚ್ಚು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿರುವದು ಜಲಪಾತದ ಆಕರ್ಷಣೀಯ ಸೌಂದರ್ಯಕ್ಕೆ ಸಾಕ್ಷಿಯಾಗಿದೆ. ಪ್ರವಾಸಿಗರ ರಕ್ಷಣೆ, ಮಾಹಿತಿಗಾಗಿ ಇಲಾಖೆಯಿಂದ ಪ್ರವಾಸಿ ಮಿತ್ರರನ್ನು ಇಲ್ಲಿಗೆ ನಿಯೋಜಿಸಲಾಗಿದ್ದು, ಇವರು ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು ಜಲಪಾತದ ಬಳಿಗೆ ಮದ್ಯವನ್ನು ಕೊಂಡೊಯ್ಯದAತೆ, ನೀರಿಗೆ ಇಳಿಯದಂತೆ, ಅಪಾಯಕಾರಿ ಸ್ಥಳಗಳತ್ತ ತೆರಳದಂತೆ ಎಚ್ಚರಿಕೆಯನ್ನು ನೀಡುತ್ತಾರೆ. - ವಿಜಯ್ ಹಾನಗಲ್