ಸಿದ್ದಾಪುರ, ಜು. ೮: ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ಅರಣ್ಯ ಇಲಾಖೆ ವತಿಯಿಂದ ರಂಗಸಮುದ್ರ ಹಾಗೂ ನಂಜರಾಯಪಟ್ಟಣ ಗ್ರಾಮದ ಅಂಗನವಾಡಿ ಕೇಂದ್ರಗಳಲ್ಲಿ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯ ಅಧಿಕಾರಿ ಸಚಿನ್ ನಿಂಬಾಳ್ಕರ್ ಮಾತನಾಡಿ, ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಹೊಂದಬೇಕು ಎಂದು ಕರೆ ನೀಡಿದರು. ಬಳಿಕ ಶಾಲಾ ವಿದ್ಯಾರ್ಥಿಗಳು ಅರಣ್ಯ ಇಲಾಖೆ ಸಿಬ್ಬಂದಿಯೊAದಿಗೆ ಸೇರಿ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಮಕ್ಕಳಿಗೆ ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ನಾಗರಾಜ್ ರಡರಟ್ಟಿ, ಚಂದ್ರಶೇಖರ್, ಜಗದೀಶ್, ಮಣಿ, ಸತೀಶ್, ವಾಹನ ಚಾಲಕ ವಚನ್, ಶಾಲಾ ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.