ಸೋಮವಾರಪೇಟೆ, ಜು. ೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಶಾಂತಳ್ಳಿ ವಲಯದ ತೋಳೂರುಶೆಟ್ಟಳ್ಳಿ ಜ್ಞಾನ ದೀಪಾ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಾಗಾರ ನಡೆಯಿತು.
ಪ್ರಾಥಮಿಕ ಆರೋಗ್ಯ ಅಧಿಕಾರಿ ಪ್ರಕಾಶ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಪೌಷ್ಠಿಕ ಆಹಾರಗಳ ಬಗ್ಗೆ ಮಾಹಿತಿ ನೀಡಿದರು. ಸಿ.ಹೆಚ್.ಓ. ನವೀನ್ ಅವರು ಹೆಚ್.ಪಿ.ವಿ. ವ್ಯಾಕ್ಸಿನ್ ಬಗ್ಗೆ ಮಾಹಿತಿ ಒದಗಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರು ವಿವಿಧ ಬಗೆಯ ಪೌಷ್ಠಿಕ ಆಹಾರಗಳನ್ನು ಮನೆಯಲ್ಲಿ ತಯಾರಿಸಿ ತಂದಿದ್ದು, ಅದನ್ನು ತಯಾರಿಸುವ ವಿಧಾನ, ಉಪಯುಕ್ತತೆಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.
ಉತ್ತಮ ಪೌಷ್ಠಿಕ ಆಹಾರ ತಯಾರಿಸಿದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ಮೊಳಕೆ ಕಾಳಿನಿಂದ ಪೋಷಕಾಂಶಯುಕ್ತ ಸಲಾಡ್ ತಯಾರಿಸುವ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜೀ ಅಧ್ಯಕ್ಷೆ ಭವಾನಿ ಮಂಜುನಾಥ್, ವಲಯ ಮೇಲ್ವಿಚಾರಕ ಲಕ್ಷ್ಮಣ್, ಸೇರಿದಂತೆ ಒಕ್ಕೂಟದ ಅಧ್ಯಕ್ಷೆ ಸರಿತ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವನ, ಸೇವಾ ಪ್ರತಿನಿಧಿ ಗಣೇಶ್ ಹಾಗೂ ಕೇಂದ್ರದ ಸದಸ್ಯರು ಪಾಲ್ಗೊಂಡಿದ್ದರು.