ಗೋಣಿಕೊಪ್ಪ, ಜು. ೯: ಭಾರತದ ಸಂಸ್ಕೃತಿ, ಆಚಾರ-ವಿಚಾರ, ವೇದ, ಪುರಾಣ ಹಾಗೂ ಉಪನಿಷತ್ತುಗಳನ್ನು ಉಳಿಸುವ ಜವಾಬ್ದಾರಿಯ ಕಡೆಗೆ ಬ್ರಾಹ್ಮಣ ಮನಸ್ಸು ಸದಾ ಮಿಡಿಯಬೇಕು ಎಂದು ಕುಂದಾಪುರ ಬಾಳೆಕುಂದ್ರು ಶ್ರೀಮಠದ ಜಗದ್ಗುರು ಶ್ರೀ ಶಂಕರಾಚಾರ್ಯ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಹೇಳಿದರು.
ಕೊಡಗು ಜಿಲ್ಲಾ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸುಮಾರು ೧ ಕೋಟಿ ವೆಚ್ಚದಲ್ಲಿ ಕೈಕೇರಿ ಗ್ರಾಮದಲ್ಲಿ ನಿರ್ಮಿಸಿರುವ ನೂತನ ವಿಪ್ರ ಸಭಾ ಭವನದ ಲೋಕಾರ್ಪಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು. ಬ್ರಾಹ್ಮಣ ಧರ್ಮವು ಮನುಕುಲದ ಒಳಿತಿಗೆ ಶ್ರೇಷ್ಠ ಕೊಡುಗೆ ನೀಡಿದೆ. ಬ್ರಾಹ್ಮಣರು ಬ್ರಹ್ಮಜ್ಞಾನದ ಪರಂಪರೆಯನ್ನು ಹೊಂದಿರುವುದರಿAದ ಸಮಾಜದಲ್ಲಿ ಗೌರವದ ಸ್ಥಾನ ಪಡೆದಿದ್ದಾರೆ. ಹೀಗಾಗಿ ಸ್ವಾರ್ಥ ಭಾವನೆಗಳನ್ನು ಬದಿಗಿಟ್ಟು ತ್ಯಾಗ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಬ್ರಾಹ್ಮಣತ್ವದ ಮೌಲ್ಯಗಳನ್ನು ಉಳಿಸಿಕೊಂಡಾಗ ಭಾರತದ ಸಂಸ್ಕೃತಿಯೂ ಉಳಿಯುತ್ತದೆ ಎಂದು ಹೇಳಿದರು.
ವಿಪ್ರ ಯುವ ಸಂಘದ ನೂತನ ಅನ್ನಪೂರ್ಣ ಭೋಜನ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಭಾರತೀಯ ಸಂಸ್ಕೃತಿಯಲ್ಲಿ ಬ್ರಾಹ್ಮಣರನ್ನು ಗೌರವದ ಸ್ಥಾನದಲ್ಲಿ ಕಾಣಲಾಗುತ್ತದೆ. ವೇದ, ಪುರಾಣ ಹಾಗೂ ಧಾರ್ಮಿಕ ಪರಂಪರೆಗಳ ಉಳಿವಿನಲ್ಲಿ ಬ್ರಾಹ್ಮಣ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಸಮುದಾಯದ ಪಾತ್ರ ಮಹತ್ವದ್ದಾಗಿದೆ ಎಂದರು. ಬ್ರಾಹ್ಮಣ ಸಮುದಾಯವು ಸಂಖ್ಯೆಯಲ್ಲಿ ಸಣ್ಣದಾಗಿದ್ದು, ಹಲವು ಆರ್ಥಿಕ ಹಾಗೂ ಸಾಮಾಜಿಕ ಸವಾಲುಗಳನ್ನು ಎದುರಿಸುತ್ತಿದೆ. ಸಮುದಾಯದ ಆರ್ಥಿಕ ಅಭಿವೃದ್ಧಿಗೆ ಸಮಾಜದ ಸಹಕಾರ ಅಗತ್ಯವಿದೆ ಎಂದು ಹೇಳಿದರು. ಇದೇ ಸಂದರ್ಭ ವಿಪ್ರ ಭವನದ ಮುಂದುವರಿದ ಕಾಮಗಾರಿಗೆ ೫ ಲಕ್ಷ ಅನುದಾನ ನೀಡುವ ಭರವಸೆ ನೀಡಿದರು.
ಕೊಡಗು ಜಿಲ್ಲಾ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ವೈಲಾಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ರಾಹ್ಮಣರ ಒಗ್ಗಟ್ಟಿನಿಂದ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬರೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಸಕ ಎ.ಎಸ್. ಪೊನ್ನಣ್ಣ, ವಿಧಾನಸಭಾ ಮಾಜಿ ಸಭಾಪತಿ ಕೆ.ಜಿ. ಬೋಪಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಿ ಶುಭಕೋರಿದರು.
ಕೊಡಗು ಜಿಲ್ಲಾ ಬ್ರಾಹ್ಮಣ ಸಂಘದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಕೆದಿಲಾಯ, ಉಪಾಧ್ಯಕ್ಷ ಮೋಹನ್ ನಲ್ಲೂರಾಯ, ಕೋಶಾಧಿಕಾರಿ ಪವನ್ ಕಂಡಿಪಾಡಿತ್ತಾಯ, ಸುನಿತಾ ಸುದರ್ಶನ್, ಸಾವಿತ್ರಿ ಹರೀಶ್, ಗುರುರಾಜ್ ಭಟ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು. ಇದೇ ಸಂದರ್ಭ ಡಾ. ಮೇಘ ಅವರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.