ಕೊಡಗು ಜಿಲ್ಲಾ ಪಿಡಿಓ ಸಂಘ ಒತ್ತಾಯ
ನಾಪೋಕ್ಲು, ಜು. ೧೨: ಅನುದಾನ ವಿಳಂಬ, ಇ-ಸ್ವತ್ತು ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಕೊಡಗು ಜಿಲ್ಲಾ ಪಿಡಿಓಗಳ ಸಂಘ ಆಗ್ರಹಿಸಿದೆ.
ಹದಿನೈದನೇ ಹಣಕಾಸು ಆಯೋಗದ ಅನುದಾನ ಬಿಡುಗಡೆ ವಿಳಂಬ ಹಾಗೂ ಇ-ಸ್ವತ್ತು ೨.೦ ತಂತ್ರಾAಶದ ತಾಂತ್ರಿಕ ಸಮಸ್ಯೆಗಳಿಂದ ರಾಜ್ಯದ ಗ್ರಾಮ ಪಂಚಾಯಿತಿಗಳ ಕಾರ್ಯನಿರ್ವಹಣೆಗೆ ತೀವ್ರ ಅಡಚಣೆ ಉಂಟಾಗುತ್ತಿದೆ.ಅನುದಾನ ವಿಳಂಬದಿAದ ಕುಡಿಯುವ ನೀರು, ನೈರ್ಮಲ್ಯ, ಬೀದಿ ದೀಪ ನಿರ್ವಹಣೆ, ಸ್ವಚ್ಛತಾ ಸಿಬ್ಬಂದಿ ವೇತನ ಹಾಗೂ ಕಚೇರಿ ನಿರ್ವಹಣೆಯಂತಹ ಮೂಲಭೂತ ಸೇವೆಗಳನ್ನು ಒದಗಿಸಲು ಸಮಸ್ಯೆಯಾಗುತ್ತಿದೆ. ಇದಕ್ಕೆ ಸಂಬAಧಿಸಿದAತೆ ಸರ್ಕಾರದ ವಿಳಂಬ ದೋರಣೆ ಬಗ್ಗೆ ಸಂಘವು ಆಕ್ಷೇಪಿಸಿದೆ.
೨೦೨೪-೨೫ ಹಾಗೂ ೨೦೨೫-೨೬ನೇ ಸಾಲಿನ ಹದಿನೈದನೇ ಹಣಕಾಸು ಆಯೋಗದ ಅನುದಾನ ಸಮರ್ಪಕವಾಗಿ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದು ಸಂಘದ ಕೊಡಗು ಜಿಲ್ಲಾಧ್ಯಕ್ಷ ಕೆ.ಎಂ. ಚಂದ್ರಮೌಳಿ ತಿಳಿಸಿದ್ದಾರೆ.
ಇದರ ಜೊತೆಗೆ ಇ-ಸ್ವತ್ತು ೨.೦ ತಂತ್ರಾAಶ ಜಾರಿಯಾದ ಬಳಿಕ ಹಲವು ತಾಂತ್ರಿಕ ಸಮಸ್ಯೆಗಳು ಮುಂದುವರಿದಿವೆ. ೧೧ಬಿ, ಮೇಲಾಧಿಕಾರಿಗಳ ಲಾಗಿನ್ ಹೊಸ ಅರ್ಜಿ ಅನುಮೋದನೆ, ದಾಖಲೆ ತಿದ್ದುಪಡಿ ಸೇರಿದಂತೆ ಹಲವು ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದು, ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸೇವೆ ಒದಗಿಸಲು ಅಡಚಣೆ ಉಂಟಾಗಿದೆ ಎಂದು ಸಂಘ ತಿಳಿಸಿದೆ.
ತಾಂತ್ರಿಕ ದೋಷಗಳು ಹಾಗೂ ಅನುದಾನ ಬಿಡುಗಡೆ ವಿಳಂಬದಿAದ ಉಂಟಾಗುತ್ತಿರುವ ಸಮಸ್ಯೆಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ಇಂತಹ ಕ್ರಮಗಳಿಗೆ ಸಂಘವು ತೀವ್ರವಾಗಿ ಆಕ್ಷೇಪಿಸಿದ್ದು, ಸರ್ಕಾರ ಕೂಡಲೇ ಬಾಕಿ ಅನುದಾನ ಬಿಡುಗಡೆ ಮಾಡಿ, ಇ-ಸ್ವತ್ತು ೨.೦ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.