ಕೂಡಿಗೆ, ಜು. ೧೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ, ದಾನಿ ಹರಪಳ್ಳಿ ರವೀಂದ್ರ ಅವರು ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಣೆ ಮಾಡಿದರು.

ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದರು.

ಈ ಸಂದರ್ಭ ಗಿರೀಶ್, ಯೋಗೇಶ್, ಮಧು, ಶಾಲಾ ಮುಖ್ಯೋಪಾಧ್ಯಾಯಿನಿ ರೇಣುಕಾ, ಸಹ ಶಿಕ್ಷಕರಾದ ಮಧುಸೂದನ್, ಸುಂದರ್, ಗಾಯಿತ್ರಿ, ಆರಿಫಾ, ಮಿಥುನ್, ಉಪಸ್ಥಿತರಿದ್ದರು. ರೇಣುಕಾ ನಿರೂಪಿಸಿ, ಮಧುಸೂದನ್ ವಂದಿಸಿದರು.