ಮಡಿಕೇರಿ, ಜು. ೧೨: ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ (ಯುಯುಸಿಎಂಎಸ್) : hಣಣಠಿs://uuಛಿms.ಞಚಿಡಿಟಿಚಿಣಚಿಞಚಿ.gov.iಟಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೧೮ ಕೊನೆ ದಿನ ಆಗಿರುತ್ತದೆ. ಎಂ.ವಿ.ಎ. ಸ್ನಾತಕೋತ್ತರ ಪದವಿಯು ದೃಶ್ಯ ಕಲೆಯಲ್ಲಿ ಎರಡು ವರ್ಷಗಳ ನಾಲ್ಕು ಸೆಮಿಸ್ಟರ್‌ಗಳ ``ಸಿಬಿಸಿಎಸ್” ಪದ್ಧತಿಯ ಕೋರ್ಸು ಆಗಿದ್ದು, ಈ ಸ್ನಾತಕೋತ್ತರ ಪದವಿಯು ಚಿತ್ರಕಲೆ, ಶಿಲ್ಪಕಲೆ ಮತ್ತು ಗ್ರಾಫಿಕ್ಸ್ (ಅಚ್ಚುಕಲೆ) ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ.
ಪ್ರವೇಶಾತಿ ಕೋರಿ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ದಿನಾಂಕವನ್ನು ನಂತರ ತಿಳಿಸಲಾಗುವುದು. ಆಸಕ್ತರು ತಾ. ೧೮ ರೊಳಗೆ ಯುಯುಸಿಎಂಎಸ್ : hಣಣಠಿs://uuಛಿms.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ hಣಣಠಿs://ಛಿಚಿvಚಿಟಿmಥಿsoಡಿe.ಞಚಿಡಿಟಿಚಿಣಚಿಞಚಿ.gov.iಟಿ/ ದೂರವಾಣಿ ಸಂಖ್ಯೆ ೦೮೨೧-೨೪೩೮೯೩೧ ಮೂಲಕ ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ತಿಳಿಸಿದ್ದಾರೆ.