ಕೂಡಿಗೆ, ಜು. ೧೨: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಸ್ವಾಗತ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್, ವಿದ್ಯಾರ್ಥಿಗಳು ಇಷ್ಟಪಟ್ಟು ಕಠಿಣ ಪರಿಶ್ರಮ ಹಾಗೂ ಸತತ ಅಧ್ಯಯನದಿಂದ ಓದಿದರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವೆಂದರು.

ಹಿರಿಯ ಉಪನ್ಯಾಸಕ ಎಂ.ಟಿ. ರಮೇಶ್, ಪ್ರಥಮ ಬಾರಿಗೆ ನಮ್ಮ ಕಾಲೇಜಿಗೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಾರ್ಗದರ್ಶನದಲ್ಲಿ ತಮ್ಮ ವ್ಯಾಸಂಗವನ್ನು ಮುಂದುವರಿಸಬೇಕು. ಉತ್ತಮ ಕಲಿಕೆಯೊಂದಿಗೆ ಉತ್ತಮ ಫಲಿತಾಂಶ ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿಯನ್ನು ತರಬೇಕು ಎಂದು ಹೇಳಿದರು.

ಉಪನ್ಯಾಸಕ ಹನುಮರಾಜು ಮಾತನಾಡಿ, ವಿದ್ಯಾರ್ಥಿಗಳು ದಾರಿ ತಪ್ಪದೆ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ನಾಗಪ್ಪ ಯಾಲಕ್ಕಿಕಟ್ಟೆ, ಲಿನೆಟ್ ಟಿ. ಫರ್ನಾಲಿಸ್, ಸೂಸಿ ತಂಗಚ್ಚನ್, ಆನಂದ್, ರವೀಶ್, ಅನುಷಾ, ಗೌತಮಿ, ಆಶಾ ಇದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.