ಕೋವರ್ ಕೊಲ್ಲಿ ಇಂದ್ರೇಶ್
ಬೆAಗಳೂರು, ಜು. ೧೨: ಕಳೆದ ೨೦೨೨ರ ಜುಲೈ ೨೬ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕೊಡಗು ಜಿಲ್ಲೆಯ ವ್ಯಕ್ತಿ ಸೇರಿದಂತೆ ಒಟ್ಟು ಇಬ್ಬರನ್ನು ರಾಷ್ಟಿçÃಯ ತನಿಖಾ ದಳ (ಎನ್‌ಐಎ) ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಶಾದ್ (೩೨) ಬೆಂಗಳೂರಿನಲ್ಲಿ ಸಿಕ್ಕಿಬಿದ್ದರೆ, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲು ಕಾನ್ವೆಂಟ್ ರೋಡ್ ನಿವಾಸಿ ಅಬ್ದುಲ್ ನಾಸಿರ್ (೪೧) ನನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.
ಕೃತ್ಯ ಎಸಗಿದ್ದ ಪ್ರಮುಖ ಆರೋಪಿಗಳಿಗೆ ಕೊಡಗು, ಮೈಸೂರು ಹಾಗೂ ತಮಿಳುನಾಡಿನ ಈರೋಡ್‌ನಲ್ಲಿ ಅಡಗಿಕೊಳ್ಳಲು ವ್ಯವಸ್ಥೆ ಮಾಡಿದ್ದ ಆರೋಪ ಇವರ ಮೇಲಿದ್ದು ಒಟ್ಟು ೨೭ ಜನ ಆರೋಪಿಗಳ ಪಟ್ಟಿಯಲ್ಲಿ ಇವರನ್ನೂ ಸೇರಿಸಲಾಗಿತ್ತು. ಪ್ರಕರಣದ ಬೆನ್ನತ್ತಿದ್ದ ಎನ್‌ಐಎ ಅಧಿಕಾರಿಗಳು ಒಬ್ಬೊಬ್ಬರನ್ನೇ ಬಲೆಗೆ ಕೆಡವಿ ಒಟ್ಟು ೨೧ ಜನ ಆರೋಪಿಗಳ ಹೆಡೆಮುರಿ ಕಟ್ಟಿದ್ದರು. ಕೊನೆಗೆ ಆರು ಮಂದಿ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರಿAದ ಅವರ ಪತ್ತೆಗಾಗಿ ಮಾಹಿತಿ ಕೊಟ್ಟವರಿಗೆ ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಸೋಮವಾರಪೇಟೆಯ ಕಾನ್ವೆಂಟ್ ರಸ್ತೆ ಸಿವಾಸಿ ಅಬ್ದುಲ್ ನಾಸಿರ್ (೪೧) ಕೊಲ್ಲಿ ರಾಷ್ಟçಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ಎಂಬ ಮಾಹಿತಿ ಇತ್ತು. ಎನ್‌ಐಎ ಅಧಿಕಾರಿಗಳು ತಮ್ಮದೇ ಗುಪ್ತಚರ ಮೂಲಗಳಿಂದ ಚಲನವಲನ ಪತ್ತೆ ಮಾಡಿ ಬಂಧನಕ್ಕೆ ಬಲೆ ಬೀಸಿದ್ದರು. ಅಧಿಕಾರಿಗಳು ೨೦೨೫ರ ಏಪ್ರಿಲ್‌ನಲ್ಲಿ ತಲೆಮರೆಸಿಕೊಂಡ ನಾಲ್ವರು ಆರೋಪಿಗಳ ಬಗ್ಗೆಯೂ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಅಬ್ದುಲ್ ನಾಸಿರ್ ಅನೇಕ ವರ್ಷಗಳಿಂದ ಸೋಮವಾರಪೇಟೆಯ ಮಾರ್ಕೆಟ್ ಬಳಿಯ ಆಟೋ ಮೊಬೈಲ್ ಅಂಗಡಿಯಲ್ಲಿ ನಂಬಿಕಸ್ಥ ಮಾರಾಟ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದನು. ಈತ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತು ಯಾರಿಗೂ ಅನುಮಾನ ಇರಲಿಲ್ಲ. ಆದರೆ ಎನ್‌ಐಎ ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಿದಾಗ ಇತರ ಬಂಧಿತ ಆರೋಪಿಗಳು ನೀಡಿದ ಸುಳಿವಿನ ಮೇರೆಗೆ ಈತನ ಪಾತ್ರ ತಿಳಿದು ಬಂದಿತ್ತು. ಆದರೆ ಹತ್ಯೆ ಪ್ರಕರಣದ ಮಾರನೇ ದಿನವೇ ಈತ ಪರಾರಿ ಆಗಿದ್ದ ೨೦೨೨ರ ಜುಲೈ ೨೬ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಪಿಎಫ್‌ಐ ಕಾರ್ಯಕರ್ತರು ಹಿಂದು ಮುಖಂಡರನ್ನು ಗುರಿಯಾಗಿಸಿದ ಹತ್ಯೆಯ ಭಾಗವಾಗಿ ಕೊಲೆ ನಡೆಸಿದ್ದರು ಎಂಬುದಾಗಿ ಜಾರ್ಜ್ ಶೀಟ್ ಸಲ್ಲಿಸಿತ್ತು. ತಲೆಮರೆಸಿಕೊಂಡಿದ್ದವರು ವೇಷ ಮರೆಸಿಕೊಂಡು ಬೆಂಗಳೂರು ಮತ್ತು ಕೇರಳದಲ್ಲಿ ಅಡಗಿದ್ದಾರೆಂಬ ಶಂಕೆಯಿತ್ತು. ಈ ಹಿನ್ನೆಲೆಯಲ್ಲಿ ಮಾಹಿತಿ ಕೊಟ್ಟವರಿಗೆ ತಲಾ ಎರಡು ಲಕ್ಷ ರೂಪಾಯಿಗಳ ಬಹುಮಾನವನ್ನೂ ಘೋಷಣೆ ಮಾಡಲಾಗಿತ್ತು. ಇಂದು ಎನ್‌ಐಎ ಅಧಿಕಾರಿಗಳ ತಂಡ ಕೇರಳ ಹಾಗೂ ತಮಿಳುನಾಡಿನಿಂದ ಆರೋಪಿಗಳನ್ನು ಬೆಂಗಳೂರಿಗೆ ಕರೆ ತಂದು ತೀವ್ರ ವಿಚಾರಣೆಗೆ ಒಳಪಡಿಸಿದೆ.